Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:7 - ಕನ್ನಡ ಸತ್ಯವೇದವು J.V. (BSI)

7 ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು; ಹೌದು, ವಿುತ್ರರೂ ಅವನಿಗೆ ದೂರವಾಗುವರು. [ಅವರ] ಬರೀ ಮಾತುಗಳನ್ನು [ನಂಬಿ] ಹಿಂಬಾಲಿಸಿದರೆ ಏನೂ ಸಿಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು, ಹೌದು, ಮಿತ್ರರೂ ಅವನಿಗೆ ದೂರವಾಗುವರು. ಅವರ ಬರೀ ಮಾತುಗಳನ್ನು ನಂಬಿ ಹಿಂಬಾಲಿಸಿದರೆ ಏನೂ ಸಿಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬಡವನನ್ನು ಬಂಧುಗಳೆಲ್ಲರು ಹಗೆಮಾಡುವರು; ಮಿತ್ರರೋ ಖರೆಯಾಗಿ ಅವನಿಗೆ ದೂರವಾಗುವರು; ಹಿಂಬಾಲಿಸಿ ಬರುವವರು ಅವನ ಬಾಯಿಮಾತನ್ನು ನಂಬರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬಡವನಿಗೆ ಅವನ ಕುಟುಂಬವು ವಿರುದ್ಧವಾಗುವುದು; ಅವನ ಸ್ನೇಹಿತರೆಲ್ಲಾ ಮುಖತಿರುವಿಕೊಂಡು ಅವನಿಗೆ ದೂರವಾಗುವರು. ಆ ಬಡವನು ಸಹಾಯಕ್ಕಾಗಿ ಬೇಡಿಕೊಂಡರೂ ಅವನ ಸಮೀಪಕ್ಕೆ ಯಾರೂ ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬಡವನ ಬಂಧುಗಳೆಲ್ಲರು ಅವನನ್ನು ಹಗೆ ಮಾಡುತ್ತಾರೆ; ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಮೊರೆಯಿಟ್ಟು ಹಿಂಬಾಲಿಸಿದರೂ ಅವನಿಗೆ ಏನೂ ದೊರಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:7
15 ತಿಳಿವುಗಳ ಹೋಲಿಕೆ  

ಭಾಗ್ಯವಂತನಿಗೆ ಬಹುಮಂದಿ ಸ್ನೇಹಿತರು; ಬಡವನಿಗೆ ಇದ್ದ ಸ್ನೇಹಿತನೂ ಅಗಲುವನು.


ಬಡವನ ಮೊರೆಗೆ ಕಿವಿಮುಚ್ಚಿಕೊಳ್ಳುವವನು ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.


ಬಡವನು ಬಿನ್ನೈಸುವನು; ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು.


ನನ್ನ ಕಣ್ಣುಗಳೂ ಮೊಬ್ಬಾಗಿಹೋದವು. ನನ್ನ ಆಪ್ತಸ್ನೇಹಿತರು ನನ್ನ ಜಾಡ್ಯವನ್ನು ನೋಡಿ ಓರೆಯಾಗಿ ಹೋಗುತ್ತಾರೆ; ನನ್ನ ಬಂಧುಗಳು ದೂರ ನಿಲ್ಲುತ್ತಾರೆ.


ನೀವಾದರೋ ಬಡವರನ್ನು ಅವಮಾನ ಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋಗುವವರು ಐಶ್ಚರ್ಯವಂತರಲ್ಲವೋ?


ಬಡವನು ನೆರೆಯವನಿಗೂ ಅಸಹ್ಯ; ಧನವಂತನಿಗೆ ಬಹು ಜನ ವಿುತ್ರರು.


ನನ್ನ ಆಪ್ತವಿುತ್ರರನ್ನು ದೂರಮಾಡಿದಿ; ಅಂಧಕಾರವೇ ನನ್ನ ಪರಿಚಯವು.


ನನ್ನ ಆಪ್ತರು ನನ್ನನ್ನು ಹೇಸಿ ಬಿಟ್ಟುಹೋಗುವಂತೆ ಮಾಡಿದ್ದೀ; ಕಟ್ಟಲ್ಪಟ್ಟಿದ್ದೇನೆ, ಬಿಡಿಸಿಕೊಳ್ಳಲಾರೆ.


ಐಶ್ವರ್ಯವಂತನಿಗೆ ಐಶ್ವರ್ಯವು ಬಲವಾದ ಕೋಟೆ; ಬಡವನಿಗೆ ಬಡತನವು ಅಳಿವು.


ನನ್ನ ಪ್ರಾಣವನ್ನು ತೆಗೆಯಬೇಕೆಂಬವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ.


ನಿನಗೂ ನಿನ್ನ ತಂದೆಗೂ ವಿುತ್ರನಾದವನನ್ನು ಬಿಡಬೇಡ; ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು; ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು