Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 2:10 - ಕನ್ನಡ ಸತ್ಯವೇದವು J.V. (BSI)

10 ಜ್ಞಾನವು ನಿನ್ನ ಹೃದಯದೊಳಗೆ ಪ್ರವೇಶಿಸುವದು, ತಿಳುವಳಿಕೆಯು ನಿನ್ನ ಆತ್ಮಕ್ಕೆ ಅಂದವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಜ್ಞಾನವು ನಿನ್ನ ಹೃದಯದೊಳಗೆ ಪ್ರವೇಶಿಸುವುದು, ತಿಳಿವಳಿಕೆಯು ನಿನ್ನ ಆತ್ಮಕ್ಕೆ ಹಿತಕರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಜ್ಞಾನ ಉದಯಿಸುವುದು ನಿನ್ನ ಹೃದಯದೊಳಗೆ, ತಿಳುವಳಿಕೆ ಬೆಳಗುವುದು ನಿನ್ನ ಆತ್ಮದೊಳಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಜ್ಞಾನವು ನಿನ್ನ ಹೃದಯದ ಒಳಗೆ ಬರುವುದು; ನಿನ್ನ ಆತ್ಮವು ತಿಳುವಳಿಕೆಯೊಡನೆ ಸಂತೋಷವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿಸಿ, ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಹಿತಕರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 2:10
15 ತಿಳಿವುಗಳ ಹೋಲಿಕೆ  

ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ ಹೃದಯಾನಂದವೂ ಆದವು; ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಸಕಲಜ್ಞಾನದಿಂದ ಕೂಡಿದವರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿಕೊಳ್ಳಿರಿ, ಬುದ್ಧಿಹೇಳಿಕೊಳ್ಳಿರಿ; ಕರ್ತನ ಕೃಪೆಯನ್ನು ನೆನಸಿಕೊಳ್ಳುವವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಗಾನಮಾಡಿರಿ.


ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.


ಒಬ್ಬನು ತಾನು ಸಂಪಾದಿಸಿದ ದೊಡ್ಡ ಕೊಳ್ಳೆಯಲ್ಲಿ ಹೇಗೋ ಹಾಗೆಯೇ ನಾನು ನಿನ್ನ ನುಡಿಯಲ್ಲಿ ಆನಂದಿಸುತ್ತೇನೆ.


ನನ್ನ ಧ್ಯಾನದಿಂದ ಆತನಿಗೆ ಮೆಚ್ಚಿಕೆಯಾಗಲಿ; ನಾನಾದರೋ ಯೆಹೋವನಲ್ಲಿ ಆನಂದಿಸುವೆನು.


ಅವು ಬಂಗಾರಕ್ಕಿಂತಲೂ ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ.


ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವಾಸ್ತ್ಯವನ್ನಾಗಿ ಆರಿಸಿಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ.


ವಿವೇಕಿಯ ಹೃದಯ ಜ್ಞಾನಾಶ್ರಯ; ಜ್ಞಾನಹೀನನ ಒಳಗುಟ್ಟು ರಟ್ಟು.


ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ; ಅವು ನನ್ನ ಬಾಯಿಗೆ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.


ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ; ದಿನವೆಲ್ಲಾ ಅದೇ ನನ್ನ ಧ್ಯಾನ.


ಇವು ಮೂಢರಿಗೆ ಜಾಣತನವನ್ನೂ ಯೌವನಸ್ಥರಿಗೆ ತಿಳುವಳಿಕೆಯನ್ನೂ ಬುದ್ಧಿಯನ್ನೂ ಉಂಟುಮಾಡುವವು.


ನೀನು ಆ ಮಾತುಗಳನ್ನು ಅಂತರಂಗದಲ್ಲಿ ಕಾಪಾಡುತ್ತಾ ತುಟಿಗಳಲ್ಲಿ ಸಿದ್ಧಪಡಿಸಿಕೊಂಡಿದ್ದರೆ ಎಷ್ಟೋ ರಮ್ಯ.


ಜ್ಞಾನವನ್ನು ಬಿಡದಿದ್ದರೆ ಅದು ನಿನ್ನನ್ನು ಕಾಪಾಡುವದು, ಪ್ರೀತಿಸಿದರೆ, ನಿನ್ನನ್ನು ಕಾಯುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು