Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 2:17 - ಕನ್ನಡ ಸತ್ಯವೇದವು J.V. (BSI)

17 ಅವಳು ತನ್ನ ಯೌವನಕಾಲದ ಕಾಂತನನ್ನು ತ್ಯಜಿಸಿ ತನ್ನ ದೇವರ ಮುಂದೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಟ್ಟಿದ್ದಾಳಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವಳು ತನ್ನ ಯೌವನಕಾಲದ ಕಾಂತನನ್ನು ತ್ಯಜಿಸಿ, ತನ್ನ ದೇವರ ಮುಂದೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಟ್ಟಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿನ್ನನ್ನು ಅದು ತಪ್ಪಿಸುವುದು ತನ್ನ ಯೌವನಕಾಲದ ಪ್ರಿಯನನ್ನು ತ್ಯಜಿಸಿದವಳಿಂದ, ತನ್ನ ದೇವರ ಮುಂದೆ ಮಾಡಿದ ಒಪ್ಪಂದವನ್ನು ಮರೆತವಳಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೌವನಪ್ರಾಯದಲ್ಲಿ ಮದುವೆಮಾಡಿಕೊಂಡ ಅವಳು ತನ್ನ ಗಂಡನನ್ನು ಬಿಟ್ಟುಬಿಟ್ಟಿದ್ದಾಳೆ; ಮದುವೆಯಲ್ಲಿ ದೇವರ ಮುಂದೆ ಮಾಡಿದ ವಾಗ್ದಾನಗಳನ್ನು ಮೀರಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವಳು ತನ್ನ ಯೌವನ ಕಾಲದ ಪತಿಯನ್ನು ತ್ಯಜಿಸಿದ್ದಾಳೆ, ದೇವರ ಸನ್ನಿಧಿಯಲ್ಲಿ ಮಾಡಿಕೊಂಡ ಒಡಂಬಡಿಕೆಯನ್ನೂ ಕಡೆಗಣಿಸಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 2:17
6 ತಿಳಿವುಗಳ ಹೋಲಿಕೆ  

ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯ ನೆರಿಗೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡದರಿಂದ ನೀನು ನನ್ನವಳಾದಿ; ಇದು ಕರ್ತನಾದ ಯೆಹೋವನ ನುಡಿ.


ಈಗತಾನೆ ನನ್ನನ್ನು - ನನ್ನ ತಂದೆ, ನನ್ನ ಯೌವನದ ಆಪ್ತನು ಎಂದು ಕರೆಯುತ್ತೀಯಲ್ಲಾ.


ನಿನ್ನ ಬುಗ್ಗೆಯು [ದೇವರ] ಆಶೀರ್ವಾದವನ್ನು ಹೊಂದಲಿ, ನಿನ್ನ ಯೌವನಕಾಲದ ಪತ್ನಿಯಲ್ಲಿ ಆನಂದಿಸು.


ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರು ಒಂದೇ ಶರೀರವಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು