Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:1 - ಕನ್ನಡ ಸತ್ಯವೇದವು J.V. (BSI)

1 ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ; ಇವುಗಳಿಂದ ಓಲಾಡುವವನು ಜ್ಞಾನಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದ್ರಾಕ್ಷಾರಸದಿಂದ ನಗೆಯಾಟ, ಮಧ್ಯದಿಂದ ಕೂಗಾಟ; ಇವುಗಳಿಂದ ತೂರಾಟಕ್ಕೆ ತುತ್ತಾಗುವವನು ಜ್ಞಾನಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದ್ರಾಕ್ಷಾರಸವು ಪರಿಹಾಸ್ಯಕ್ಕೂ ಮದ್ಯವು ಕೂಗಾಟಕ್ಕೂ ನಡೆಸುತ್ತವೆ. ಅಮಲೇರಿಸಿಕೊಳ್ಳುವುದು ಮೂರ್ಖತನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ; ಇವುಗಳಿಂದ ಮೋಸ ಹೋದವನು ಜ್ಞಾನಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:1
21 ತಿಳಿವುಗಳ ಹೋಲಿಕೆ  

ವ್ಯಭಿಚಾರದ್ರಾಕ್ಷಾರಸಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ; ಅದರಿಂದ ಪಟಿಂಗತನವು ಹುಟ್ಟುತ್ತದೆ.


ಈ [ನನ್ನ] ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ; ದೈವದರ್ಶನವಾಗುತ್ತಿರುವಾಗಲೂ ಓಲಾಡುತ್ತಾರೆ, ನ್ಯಾಯತೀರಿಸುತ್ತಿರುವಾಗಲೂ ಅತ್ತಿತ್ತ ತೂಗಾಡುತ್ತಾರೆ.


ದ್ರಾಕ್ಷಾರಸವನ್ನು ಕುಡಿಯುವದು ರಾಜರಿಗೆ ಯೋಗ್ಯವಲ್ಲ; ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ; ಮದ್ಯವೆಲ್ಲಿ ಎನ್ನುವದು ಪ್ರಭುಗಳಿಗೆ ವಿಹಿತವಲ್ಲ.


ಕಳ್ಳರು ಲೋಭಿಗಳು ಕುಡಿಕರು ಬೈಯುವವರು ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.


ಇವುಗಳ ವಿಷಯದಲ್ಲಿ - ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ಹಿಂದೆ ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.


ಮರುದಿನ ದಾವೀದನು ಅವನನ್ನು ಅನ್ನಪಾನತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರಕೊಂಡುಹೋಗಿ ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯಲ್ಲಿಯೂ ಅವನು ಹೋಗಿ ತನ್ನ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿ ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ.


ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷದಿನವಾಗಿರುವದು [ಎಂದು ಹರಟಿಕೊಳ್ಳುವರು].


ಅಯ್ಯೋ, ಸುರಾಪಾನದಲ್ಲಿ ಶೂರರೂ ಮದ್ಯವಿುಶ್ರಣದಲ್ಲಿ ಸಾಹಸಿಗಳೂ ಆಗಿ


ನಮ್ಮ ರಾಜನ ವರ್ಧಂತಿಯ ದಿನದಲ್ಲಿ ದ್ರಾಕ್ಷಾರಸದ ಉಷ್ಣವು ದೇಶಾಧಿಪತಿಗಳ ತಲೆಗೇರಲು ಆರಂಭವಾಯಿತು; ರಾಜನು ಆ ತುಂಟರ ಕೈಯ ಮೇಲೆ ಕೈ ಹಾಕಿದನು.


ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ - ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ; ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೋ? ಧೈರ್ಯದಿಂದಿರಿ, ಶೂರರಾಗಿರಿ ಎಂದು ಹೇಳಿದ್ದನು.


ಕುಡುಕರಲ್ಲಿಯೂ ಅತಿಮಾಂಸಭಕ್ಷಕರಲ್ಲಿಯೂ ಸೇರದಿರು.


ಅಲ್ಲದೆ ದ್ರಾಕ್ಷಾರಸವು ಮೋಸಕರವಾದ ಕಾರಣ ದುಷ್ಟನು ಮದವೇರಿದ್ದಾನೆ, ಸ್ವಸ್ಥಳದಲ್ಲಿ ನಿಲ್ಲನು; ಪಾತಾಳದ ಹಾಗೆ ಅತ್ಯಾಶೆಪಡುತ್ತಾನೆ, ಮೃತ್ಯುವಿನಂತಿದ್ದಾನೆ, ತೃಪ್ತಿಯೇ ಇಲ್ಲ; ಸಕಲ ಜನಗಳನ್ನು ಎಳೆದುಕೊಳ್ಳುತ್ತಾನೆ, ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ.


ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು ಸಂಜೆಯಾದ ಮೇಲೆಯೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಪಾಡು ಏನು ಹೇಳಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು