Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:13 - ಕನ್ನಡ ಸತ್ಯವೇದವು J.V. (BSI)

13 ನಿದ್ರಾನಿರತನಾಗಿರಬೇಡ! ಬಡವನಾದೀಯೆ; ಕಣ್ಣು ತೆರೆ! ಆಹಾರದಿಂದ ತೃಪ್ತಿಗೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿದ್ರಾನಿರತನಾಗಿರಬೇಡ! ಬಡವನಾದೀಯೆ, ಕಣ್ಣು ತೆರೆ! ಆಹಾರದಿಂದ ತೃಪ್ತಿಗೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿದ್ದೆಯಲ್ಲೆ ನಿರತನಾಗಿರಬೇಡ, ಬಡವನಾಗಿ ಬಿಡುವೆ. ಕಣ್ಣು ತೆರೆದು ದುಡಿ, ಹೊಟ್ಟೆತುಂಬ ಊಟ ಪಡೆವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿದ್ರಾನಿರತನಾಗಿರಬೇಡ, ಬಡವನಾಗುವೆ. ನಿನ್ನ ಸಮಯವನ್ನು ದುಡಿಯಲು ಉಪಯೋಗಿಸಿಕೊಂಡರೆ ನಿನಗೆ ಊಟಕ್ಕೆ ಬೇಕಾದಷ್ಟಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀವು ನಿದ್ರೆಯನ್ನು ಪ್ರೀತಿಸಿದರೆ, ನೀವು ಬಡತನದಲ್ಲಿ ಕೊನೆಗೊಳ್ಳುತ್ತೀರಿ; ನಿಮ್ಮ ಕಣ್ಣುಗಳನ್ನು ತೆರೆದರೆ, ಸಾಕಷ್ಟು ಆಹಾರ ಇರುತ್ತದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:13
15 ತಿಳಿವುಗಳ ಹೋಲಿಕೆ  

ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವದು; ಸೋಮಾರಿಯು ಹಸಿವೆಗೊಳ್ಳುವನು.


ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರ್ರಿ.


ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು; ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ.


ಜೋಲುಗೈ ದಾರಿದ್ರ್ಯ; ಚುರುಕುಗೈ ಐಶ್ವರ್ಯ.


ಸೋಮಾರಿಯ ಆಶೆಯು ವ್ಯರ್ಥ; ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.


ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ - ಕೆಲಸ ಮಾಡಲೊಲ್ಲದವನು ಊಟಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ.


ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ವಿಮೋಚನೆಯು ಹತ್ತಿರವಾಯಿತು.


ಆದದರಿಂದ - ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಕ್ರಿಸ್ತನು ನಿನಗೆ ಪ್ರಕಾಶ ಕೊಡುವನು ಎಂದು ಹೇಳಿಯದೆ.


ಹೀಗಿರಲು ಹಡಗಿನ ಯಜಮಾನನು ಅವನ ಬಳಿಗೆ ಬಂದು - ಇದೇನು, ನಿದ್ದೆ ಮಾಡುತ್ತೀ! ಎದ್ದು ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾಶವಾಗದೆ ಉಳಿದೇವು ಎಂದು ಹೇಳಿದನು.


ಇಂಥ ಅಮಲಿನಿಂದೆಚ್ಚತ್ತು ನೀತಿವಂತರಾಗಿರಿ, ಪಾಪವನ್ನು ಬಿಟ್ಟುಬಿಡಿರಿ. ಕೆಲವರಿಗೆ ದೇವರ ವಿಷಯದಲ್ಲಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಹುಟ್ಟಬೇಕೆಂದು ಇದನ್ನು ಹೇಳುತ್ತೇನೆ.


ಕೊಳ್ಳುವವನು - ಚೆನ್ನಾಗಿಲ್ಲ, ಚೆನ್ನಾಗಿಲ್ಲ ಎಂದು ಹೇಳುತ್ತಾನೆ. ಕೊಂಡುಕೊಂಡು ಹೋಗಿ ಹೆಚ್ಚಳ ಪಡುತ್ತಾನೆ.


ದುಡಿದು ಹೊಲಗೇಯುವವನಿಗೆ ಹೊಟ್ಟೆ ತುಂಬಾ ಅನ್ನ; ವ್ಯರ್ಥಕಾರ್ಯಾಸಕ್ತನಿಗೆ ಹೊಟ್ಟೆ ತುಂಬಾ ಬಡತನ.


ಇನ್ನೂ ಕತ್ತಲಿರುವಾಗಲೇ ಎದ್ದು ಮನೆಯವರಿಗೆ ತೀನಿಯನ್ನಿಕ್ಕಿ ತೊತ್ತುಗಳಿಗೆ ದಿನದ ಬತ್ಯವನ್ನು ಹಂಚುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು