ಜ್ಞಾನೋಕ್ತಿಗಳು 20:14 - ಕನ್ನಡ ಸತ್ಯವೇದವು J.V. (BSI)14 ಕೊಳ್ಳುವವನು - ಚೆನ್ನಾಗಿಲ್ಲ, ಚೆನ್ನಾಗಿಲ್ಲ ಎಂದು ಹೇಳುತ್ತಾನೆ. ಕೊಂಡುಕೊಂಡು ಹೋಗಿ ಹೆಚ್ಚಳ ಪಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಕೊಳ್ಳುವವನು, “ಚೆನ್ನಾಗಿಲ್ಲ, ಚೆನ್ನಾಗಿಲ್ಲ” ಎಂದು ಹೇಳುತ್ತಾನೆ, ಕೊಂಡುಕೊಂಡು ಹೋಗಿ ಹೆಚ್ಚಳಪಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಕೊಳ್ಳುವಾಗ ‘ಅದು ಚೆನ್ನಾಗಿಲ್ಲ, ಇದು ಚೆನ್ನಾಗಿಲ್ಲ’ ಅನ್ನುತ್ತಾನೆ; ಕೊಂಡಾದ ಮೇಲೆ ಮಾಡಿದ ಚೌಕಾಶಿಗಾಗಿ ಹೆಚ್ಚಳ ಪಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಿನ್ನ ವಸ್ತುವನ್ನು ಖರೀದಿಮಾಡುವವನು, “ಇದು ಚೆನ್ನಾಗಿಲ್ಲ! ಬೆಲೆಯೂ ಜಾಸ್ತಿ!” ಎಂದು ಹೇಳುವನು. ಬಳಿಕ ತನ್ನ ಚೌಕಾಸಿಯ ಬಗ್ಗೆ ಬೇರೆಯವರ ಮುಂದೆ ಹೊಗಳಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಇದು ಒಳ್ಳೆಯದಲ್ಲ ಇದು ಒಳ್ಳೆಯದಲ್ಲ!” ಎಂದು ಕೊಳ್ಳುವವನು ಹೇಳುತ್ತಾನೆ; ಆದರೆ ಅವನು ಕೊಂಡು ಹೋದ ಮೇಲೆ ಅದನ್ನೇ ಹೊಗಳುತ್ತಾನೆ. ಅಧ್ಯಾಯವನ್ನು ನೋಡಿ |