Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:28 - ಕನ್ನಡ ಸತ್ಯವೇದವು J.V. (BSI)

28 ರಾಜನ ಕೃಪಾಸತ್ಯತೆಗಳು ಅವನನ್ನು ಕಾಯುವವು; ಅವನ ಕರುಣೆಯೇ ಅವನ ಸಿಂಹಾಸನಕ್ಕೆ ಆಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ರಾಜನ ಕೃಪಾಸತ್ಯತೆಗಳು ಅವನನ್ನು ಕಾಯುವವು, ಅವನ ಕರುಣೆಯೇ ಅವನ ಸಿಂಹಾಸನಕ್ಕೆ ಆಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಪ್ರೀತಿಸತ್ಯತೆಗಳು ರಾಜನನ್ನು ಕಾಪಾಡುವ ಕವಚ; ಕರುಣೆಯೇ ಅವನ ಸಿಂಹಾಸನಕ್ಕೆ ಸ್ಥಿರಾಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ರಾಜನು ನಂಬಿಗಸ್ತನಾಗಿಯೂ ಪ್ರೀತಿಯುಳ್ಳವನಾಗಿಯೂ ಇದ್ದರೆ, ಅವನ ಅಧಿಕಾರ ಉಳಿದುಕೊಳ್ಳುವುದು; ಅವನ ಆಡಳಿತ ಮುಂದುವರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಪ್ರೀತಿಯೂ ನಂಬಿಗಸ್ತಿಕೆಯೂ ಅರಸನನ್ನು ಕಾಯುತ್ತವೆ; ಪ್ರೀತಿಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:28
11 ತಿಳಿವುಗಳ ಹೋಲಿಕೆ  

ಬಡವರನ್ನು ನ್ಯಾಯವಾಗಿ ಆಳುವ ರಾಜನ ಸಿಂಹಾಸನವು ಶಾಶ್ವತವು.


ರಾಜರು ಸಿಂಹಾಸನಕ್ಕೆ ಧರ್ಮವೇ ಆಧಾರವೆಂದು ತಿಳಿದು ಅಧರ್ಮವನ್ನಾಚರಿಸಲು ಅಸಹ್ಯಪಡುವರು.


ಕೃಪಾಸತ್ಯತೆಗಳಿಂದ ಪಾಪನಿವಾರಣೆ; ಯೆಹೋವನ ಭಯಭಕ್ತಿಯಿಂದ ಹಾನಿ ನಿವಾರಣೆ.


ಪ್ರೀತಿನೀತಿಗಳನ್ನು ಕುರಿತು ಹಾಡುವೆನು; ಯೆಹೋವನೇ, ನಿನ್ನನ್ನು ಕೊಂಡಾಡುವೆನು.


ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.


ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಪರಾತ್ಪರನ ಕೃಪೆಯ ದೆಸೆಯಿಂದ ಅವನು ಕದಲುವದೇ ಇಲ್ಲ.


ಇದಲ್ಲದೆ ಸಿಂಹಾಸನವು ಕೃಪಾಧಾರದ ಮೇಲೆ ಸ್ಥಾಪಿತವಾಗಿದೆ; ರಾಜ್ಯಭಾರಪ್ರವೀಣನೂ ಧರ್ಮಾಸಕ್ತನೂ ನ್ಯಾಯನಿಪುಣನೂ ಆದವನು ದಾವೀದನ ಗುಡಾರದಲ್ಲಿನ ಆ ಸಿಂಹಾಸನದ ಮೇಲೆ ಸತ್ಯಪರನಾಗಿ ಕುಳಿತಿದ್ದಾನೆ.


ಅವನು ನಿನ್ನ ಸಾನ್ನಿಧ್ಯವನ್ನು ಪಡೆದು ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮಸತ್ಯತೆಗಳು ಅವನ ಬೆಂಗಾವಲಾಗಿರಲಿ.


ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ; ನಿನ್ನ ಕೃಪಾಸತ್ಯತೆಗಳು ನನ್ನನ್ನು ಯಾವಾಗಲೂ ಕಾಪಾಡಲಿ.


ಪ್ರೀತಿಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ;


ರಾಜನೇ, ಇದರ ತಾತ್ಪರ್ಯವೇನಂದರೆ, ಎನ್ನೊಡೆಯನಾದ ಅರಸನಿಗೆ ಉಂಟಾಗಿರುವ ಪರಾತ್ಪರನ ತೀರ್ಪು ಹೀಗಿದೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು