Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:3 - ಕನ್ನಡ ಸತ್ಯವೇದವು J.V. (BSI)

3 ವ್ಯಾಜ್ಯಕ್ಕೆ ದೂರನು ಮಾನಕ್ಕೆ ಯೋಗ್ಯನು; ಜಗಳವು ಪ್ರತಿಯೊಬ್ಬ ಮೂರ್ಖನಿಗೂ ಸಹಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ವ್ಯಾಜ್ಯಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು, ಜಗಳವು ಪ್ರತಿಯೊಬ್ಬ ಮೂರ್ಖನಿಗೂ ಸಹಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕಲಹಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು; ಕಲಹಕ್ಕೆ ಕೈಹಾಕುವ ಪ್ರತಿಯೊಬ್ಬನು ಮೂರ್ಖನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ವಾದದಿಂದ ದೂರವಿರುವವನು ಸನ್ಮಾನಕ್ಕೆ ಯೋಗ್ಯನು. ಮೂಢನಾದರೊ ಜಗಳಕ್ಕೇ ಆತುರ ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಕಲಹವನ್ನು ತಡೆಯುವವನು, ಮಾನಕ್ಕೆ ಯೋಗ್ಯನು; ಆದರೆ ಬುದ್ಧಿಹೀನನು ಮಾತ್ರ ಜಗಳವಾಡಲು ಒತ್ತಾಯಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:3
17 ತಿಳಿವುಗಳ ಹೋಲಿಕೆ  

ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ; ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.


ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ; ಸಿಟ್ಟೇರುವದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.


ಒಬ್ಬರಿಗೊಬ್ಬರು ಉಪಕಾರಿಗಳಾಗಿಯೂ ಕರುಣೆಯುಳ್ಳವರಾಗಿಯೂ ಕ್ಷವಿುಸುವವರಾಗಿಯೂ ಇರ್ರಿ.


ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ; [ಪರರ] ದೋಷವನ್ನು ಲಕ್ಷಿಸದಿರುವದು ಅವನಿಗೆ ಭೂಷಣ.


ದೀರ್ಘಶಾಂತನು ಕೇವಲ ಬುದ್ಧಿವಂತನು; ಮುಂಗೋಪಿಯು ಮೂರ್ಖತನವನ್ನು [ಧ್ವಜವಾಗಿ] ಎತ್ತುವನು.


ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಹುಟ್ಟುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ಭೋಗಾಶೆಗಳಿಂದಲೇ ಅಲ್ಲವೇ.


ಜ್ಞಾನಹೀನನ ತುಟಿಗಳು ಜಗಳವನ್ನು ಹೂಡುತ್ತವೆ; ಅವನ ಬಾಯಿ ಪೆಟ್ಟುತಿನ್ನುವದಕ್ಕೆ ಕೂಗಿಕೊಳ್ಳುತ್ತದೆ.


ಆದರೆ ತೀಕ್ಷ್ಣವಾದ ಮತ್ಸರವೂ ಪಕ್ಷಭೇದವೂ ನಿಮ್ಮ ಹೃದಯದೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.


ಧರ್ಮನಿಂದಕನೆನಿಸಿಕೊಳ್ಳುವ ಸೊಕ್ಕೇರಿದ ಅಹಂಕಾರಿಯು ಗರ್ವಮದದಿಂದ ಪ್ರವರ್ತಿಸುವನು.


ಮುಂಗೋಪಿಯು ಬುದ್ಧಿಗೆಡುವನು; ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.


ಆಗ ಇಸ್ರಾಯೇಲ್ಯರ ಅರಸನಾದ ಯೋವಾಷನು ಯೆಹೂದದ ಅರಸನಾದ ಅಮಚ್ಯನಿಗೆ - ಲೆಬನೋನಿನ ಮುಳ್ಳುಗಿಡವು ಅಲ್ಲಿನ ದೇವದಾರುಮರಕ್ಕೆ - ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು ಎಂದು ಹೇಳಿಕಳುಹಿಸಿತು. ತುಸುಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡು ಮೃಗವು ಅಲ್ಲಿಂದ ಹಾದುಹೋಗುತ್ತಿರುವಾಗ ಅದನ್ನು ತುಳಿದು ಬಿಟ್ಟಿತು.


ಇದರಿಂದ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳ ಹುಟ್ಟಿತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ಇದ್ದರು.


ಹೀಗಿರಲು ಅಬ್ರಾಮನು ಲೋಟನಿಗೆ - ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರಲ್ಲವೇ.


ಒಬ್ಬನು ದಾರಿಯಲ್ಲಿ ಹೋಗುತ್ತಾ ಪರರ ವ್ಯಾಜ್ಯಕ್ಕೆ ಸೇರಿ ರೇಗಿಕೊಳ್ಳುವದು ನಾಯಿಯನ್ನು ಕಿವಿಹಿಡಿದ ಹಾಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು