Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:4 - ಕನ್ನಡ ಸತ್ಯವೇದವು J.V. (BSI)

4 ಮೈಗಳ್ಳನು ಮಳೆಗಾಲದಲ್ಲಿ ಹೊಲಗೇಯನು; ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ, ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮೈಗಳ್ಳನು ಮಳೆಗಾಲದಲ್ಲೂ ಹೊಲ ಉಳಲಾರನು; ಸುಗ್ಗಿಕಾಲದಲ್ಲಿ ಅಂಗಲಾಚಿದರೂ ಅವನಿಗೆ ಬೆಳೆಸಿಗಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸೋಮಾರಿಯು ಬಿತ್ತನೆಕಾಲದಲ್ಲಿ ಬೀಜ ಬಿತ್ತುವುದಿಲ್ಲ; ಸುಗ್ಗಿಕಾಲದಲ್ಲಿ ಅವನಿಗೆ ಬೆಳೆಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮೈಗಳ್ಳನು ಮಳೆಗಾಲದಲ್ಲಿ ಉಳುಮೆ ಮಾಡುವುದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಅಪೇಕ್ಷಿಸಿದರೂ ಏನೂ ಸಿಕ್ಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:4
14 ತಿಳಿವುಗಳ ಹೋಲಿಕೆ  

ಜೋಲುಗೈ ದಾರಿದ್ರ್ಯ; ಚುರುಕುಗೈ ಐಶ್ವರ್ಯ.


ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವದು; ಸೋಮಾರಿಯು ಹಸಿವೆಗೊಳ್ಳುವನು.


ಸೋಮಾರಿಯ ಆಶೆಯು ವ್ಯರ್ಥ; ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.


ಬಡತನವು ದಾರಿಗಳ್ಳನ ಹಾಗೂ ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು.


ಮೈಗಳ್ಳನು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ ತಿರಿಗಿ ಬಾಯ ಹತ್ತಿರಕ್ಕೆ ತರಲಾರನು.


ಸೋಮಾರಿಯೇ, ಇರುವೆಯ ಹತ್ತಿರ ಹೋಗಿ ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ತಂದುಕೋ.


ಮನುಷ್ಯನ ಹೃದಯಸಂಕಲ್ಪವು ಆಳವಾದ [ಬಾವಿಯ] ನೀರು. ಆದರೆ ವಿವೇಕಿಯು ಅದನ್ನು ಸೇದಬಲ್ಲನು.


ಸೋಮಾರಿಯ ಆಶೆಯು ಅವನನ್ನು ಕೊಲ್ಲುವದು, ಅವನ ಕೈಗಳು ದುಡಿಯಲೊಲ್ಲವಷ್ಟೆ.


ಗಾಳಿಯನ್ನು ನೋಡುತ್ತಲೇ ಇರುವವನು ಬೀಜ ಬಿತ್ತನು; ಮೋಡಗಳನ್ನು ಗಮನಿಸುತ್ತಲೇ ಇರುವವನು ಪೈರು ಕೊಯ್ಯನು .


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು