Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:6 - ಕನ್ನಡ ಸತ್ಯವೇದವು J.V. (BSI)

6 ಸ್ನೇಹಿತರೆಂದು ಹೇಳಿಕೊಳ್ಳುವವರು ಬಹುಮಂದಿ; ನಂಬಿಗಸ್ತನಾದ ಸ್ನೇಹಿತನು ಎಲ್ಲಿ ಸಿಕ್ಕುವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸ್ನೇಹಿತರೆಂದು ಹೇಳಿಕೊಳ್ಳುವವರು ಬಹಳ ಜನರು, ನಂಬಿಗಸ್ತನಾದ ಸ್ನೇಹಿತನು ಎಲ್ಲಿ ಸಿಕ್ಕುವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸ್ನೇಹಿತರೆಂದು ಹೇಳಿಕೊಳ್ಳುವವರು ಬಹುಮಂದಿ; ಆದರೆ ನಂಬಿಗಸ್ತ ಸ್ನೇಹಿತನು ಸಿಗುವುದೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅನೇಕರು ತಾವು ನಂಬಿಗಸ್ತರೆಂದು ಹೇಳಿಕೊಳ್ಳುತ್ತಾರೆ. ಆದರೆ ನಿಜವಾಗಿಯೂ ನಂಬಿಗಸ್ತನಾಗಿರುವ ಒಬ್ಬನನ್ನು ಕಂಡುಕೊಳ್ಳುವುದು ಬಹುಕಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅನೇಕರಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ಪ್ರಾಮಾಣಿಕತೆಯನ್ನು ಸಾರುವನು; ಆದರೆ ನಂಬಿಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:6
16 ತಿಳಿವುಗಳ ಹೋಲಿಕೆ  

ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಕೆಯುಳ್ಳವರು ಕಾಣಿಸುವದೇ ಇಲ್ಲ.


ಆದದರಿಂದ ನೀನು ಧರ್ಮಕೊಡುವಾಗ ನಿನ್ನ ಮುಂದೆ ಕೊಂಬೂದಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಹೀಗಿದ್ದರೂ ಮನುಷ್ಯಕುಮಾರನು ಬಂದಾಗ ಭೂವಿುಯ ಮೇಲೆ ನಂಬಿಕೆಯನ್ನು ಕಾಣುವನೋ? ಅಂದನು.


ಆದರೆ ಅವನು - ಸ್ವಾಮೀ, ನಿನ್ನ ಸಂಗಡ ಸೆರೆಮನೆಗೆ ಹೋಗುವದಕ್ಕೂ ಸಾಯುವದಕ್ಕೂ ಸಿದ್ಧವಾಗಿದ್ದೇನೆ ಅನ್ನಲು


ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ - ದೇವರೇ, ಸುಲುಕೊಳ್ಳುವವರೂ ಅನ್ಯಾಯಗಾರರೂ ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ; ಆದದರಿಂದ ನಿನಗೆ ಸ್ತೋತ್ರಮಾಡುತ್ತೇನೆ.


ನಿನ್ನನು ನೀನೇ ಹೊಗಳಿಕೊಳ್ಳಬೇಡ, ಮತ್ತೊಬ್ಬನು ಹೊಗಳಿದರೆ ಹೊಗಳಲಿ; ಆತ್ಮಸ್ತುತಿ ಬೇಡ, ಪರನು ನಿನ್ನನ್ನು ಸ್ತುತಿಸಿದರೆ ಸ್ತುತಿಸಲಿ.


ಬರೀ ಗಾಳಿ ಮೋಡಗಳು ಹೇಗೋ ದಾನಕೊಡುತ್ತೇನೆಂದು ಸುಳ್ಳಾಡಿ ಜಂಬಮಾಡುವವನೂ ಹಾಗೆಯೇ.


ಯೆರೂಸಲೇವಿುನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನನುಸರಿಸುವ ಒಬ್ಬನಾದರೂ ಇದ್ದಾನೋ, ಇಂಥ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷವಿುಸುವೆನು.


ನಾನು ಹೀಗೆ ಬರೆದು ಬುದ್ಧಿಹೀನನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಕೇವಲ ಅಲ್ಪನಾದರೂ ಅತಿ ಶ್ರೇಷ್ಠರಾದ ಅಪೊಸ್ತಲರು ಅನ್ನಿಸಿಕೊಳ್ಳುವ ಆ ಜನರಿಗಿಂತ ಒಂದರಲ್ಲಿಯಾದರೂ ಕಡಿಮೆಯಾಗಲಿಲ್ಲ.


ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ - ಇಗೋ ಇವನು ನಿಜವಾದ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.


ಆಗ ಪೇತ್ರನು - ಇಗೋ, ನಾವು ನಮ್ಮ ನಮ್ಮ ಮನೆಮಾರುಗಳನ್ನು ಬಿಟ್ಟು ನಿನ್ನ ಹಿಂದೆ ಬಂದೆವು ಎಂದು ಹೇಳಲು


ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ, ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರು ರಕ್ತಸುರಿಸಬೇಕೆಂದು ಹೊಂಚು ಹಾಕುತ್ತಾರೆ, ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.


ಸಹಸ್ರ ಪುರುಷರಲ್ಲಿ ಯೋಗ್ಯನೊಬ್ಬನನ್ನು ಕಂಡಿದ್ದರೂ ಕಂಡಿರಬಹುದು; ಸಹಸ್ರ ಸ್ತ್ರೀಯರಲ್ಲಿ ಯೋಗ್ಯಳೊಬ್ಬಳನ್ನೂ ಕಂಡಿಲ್ಲ.


ಮನುಷ್ಯನ ಹೃದಯಸಂಕಲ್ಪವು ಆಳವಾದ [ಬಾವಿಯ] ನೀರು. ಆದರೆ ವಿವೇಕಿಯು ಅದನ್ನು ಸೇದಬಲ್ಲನು.


ಪ್ರತಿಯೊಬ್ಬರು ನೆರೆಯವರೊಡನೆ ಹುಸಿಯನ್ನಾಡುತ್ತಾರೆ. ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತಾಡುತ್ತಾರೆ.


ಅಯ್ಯೋ, ನನ್ನ ಗತಿಯನ್ನು ಏನೆಂದು ಹೇಳಲಿ! ಮಾಗಿದ ಹಣ್ಣನ್ನು ಕೊಯ್ದು ದ್ರಾಕ್ಷೆಯ ಹಕ್ಕಲನ್ನು ಆಯ್ದ [ತೋಟದ] ಸ್ಥಿತಿಗೆ ಬಂದಿದ್ದೇನೆ; ತಿನ್ನುವದಕ್ಕೆ ಗೊಂಚಲೇ ಇಲ್ಲ, ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು ಸಿಕ್ಕದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು