Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:7 - ಕನ್ನಡ ಸತ್ಯವೇದವು J.V. (BSI)

7 ಸದ್ಧರ್ಮಿಯು ನಿರ್ದೋಷವಾಗಿ ನಡೆಯುವನು; ಅವನು ಗತಿಸಿದ ಮೇಲೆಯೂ ಅವನ ಮಕ್ಕಳು ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸದ್ಧರ್ಮಿಯು ನಿರ್ದೋಷವಾಗಿ ನಡೆಯುವನು, ಅವನು ಗತಿಸಿದ ಮೇಲೆಯೂ ಅವನ ಮಕ್ಕಳು ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿರ್ದೋಷಿಗಳಾಗಿ ನಡೆಯುತ್ತಾರೆ ನೀತಿವಂತರು; ಅವರು ಗತಿಸಿದ ಮೇಲೂ ಅವರ ಸಂತತಿಯವರು ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸಧರ್ಮಿಯು ಒಳ್ಳೆಯ ರೀತಿಯಲ್ಲಿ ಜೀವಿಸುತ್ತಾನೆ; ಅವನ ಮಕ್ಕಳಿಗೆ ಆಶೀರ್ವಾದವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀತಿವಂತನು ನಿರ್ದೋಷವಾಗಿ ಜೀವಿಸುತ್ತಾನೆ; ಅವನನ್ನು ಅನುಸರಿಸುವ ಅವನ ಮಕ್ಕಳು ಆಶೀರ್ವಾದ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:7
18 ತಿಳಿವುಗಳ ಹೋಲಿಕೆ  

ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವದು; ನೀತಿವಂತನ ವಂಶವು ಶುಭಹೊಂದುವದು.


ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ; ಅವನ ಸಂತತಿಯವರು ಆಶೀರ್ವಾದ ಹೊಂದುವರು.


ನಾನು ಅವರ ಹಿತವನ್ನೂ ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವವರೆಲ್ಲರಿಗೆ ಮಾಡೋಣವಾಗಿದೆ ಎಂದು ಹೇಳಿದನು.


ಕಪಟವಾಗಿ ಮಾತಾಡುವ ಮೂಢನಿಗಿಂತಲೂ ನಿರ್ದೋಷವಾಗಿ ನಡೆಯುವ ದರಿದ್ರನೇ ಶ್ರೇಷ್ಠ.


ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ; ಪಾಪಿಯ ಸೊತ್ತು ಸಜ್ಜನರಿಗೆ ಗಂಟು.


ಸರಳಮಾರ್ಗಿಯು ಯೆಹೋವನಿಗೆ ಭಯಪಡುವನು; ವಕ್ರಮಾರ್ಗಿಯು ಆತನನ್ನು ಅಸಡ್ಡೆಮಾಡುವನು.


ಅವನು ಸಜ್ಜನನೂ ನೀತಿವಂತನೂ ಮನಃಪೂರ್ವಕವಾಗಿ ಸತ್ಯವಚನವನ್ನಾಡುವವನೂ ಆಗಿರಬೇಕು.


ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದು ನಾನು ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.


[ಕೇಳಿರಿ], ಸನ್ಮಾರ್ಗದಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ಕೊಲೆಯ ಮಾತಿಗೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು;


ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು; ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದನು.


ಯೆಹೋವನಿಗೆ ಭಯಪಡುವದರಿಂದ ಕೇವಲ ನಿರ್ಭಯ; ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು