Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:12 - ಕನ್ನಡ ಸತ್ಯವೇದವು J.V. (BSI)

12 ಧರ್ಮಸ್ವರೂಪನು ಅಧರ್ಮಿಯ ಮನೆಯನ್ನು ಲಕ್ಷ್ಯಕ್ಕೆತಂದು ಅಧರ್ಮಿಗಳನ್ನು ಕೆಡವಿ ಕೇಡಿಗೆ ದೊಬ್ಬುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀತಿಸ್ವರೂಪನು ಅಧರ್ಮಿಯ ಮನೆಯನ್ನು ಲಕ್ಷ್ಯಕ್ಕೆ ತಂದು, ಅಧರ್ಮಿಗಳನ್ನು ಕೆಡವಿ ಅವರನ್ನು ಕೇಡಿಗೆ ತಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸತ್ಯಸ್ವರೂಪನ ದೃಷ್ಟಿ ದುಷ್ಟರ ಮನೆಯ ಮೇಲೆ; ಆ ದುರುಳರನ್ನು ದಬ್ಬಿಬಿಡುವನು ಕೇಡಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೇವರು ನೀತಿಸ್ವರೂಪನು. ಆತನು ದುಷ್ಟರ ದುಷ್ಕೃತ್ಯಗಳನ್ನು ಬಲ್ಲವನಾಗಿದ್ದು ಅವರನ್ನು ದಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀತಿವಂತನು ದುಷ್ಟರ ಮನೆಯನ್ನು ಗಮನಿಸುತ್ತಾನೆ; ದುಷ್ಟರನ್ನು ಕೇಡಿಗೆ ತಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:12
20 ತಿಳಿವುಗಳ ಹೋಲಿಕೆ  

ದುಷ್ಟರ ಮನೆಗೆ ನಾಶನ; ಶಿಷ್ಟರ ಗುಡಾರಕ್ಕೆ ಏಳಿಗೆ.


ಆದರೂ ಅವರೊಳಗೆ ಬಹುಮಂದಿಯ ವಿಷಯದಲ್ಲಿ ದೇವರು ಸಂತೋಷಿಸಲಿಲ್ಲ. ಅವರು ಅಡವಿಯಲ್ಲಿ ಸಂಹರಿಸಲ್ಪಟ್ಟರೆಂದು ಬರೆದದೆಯಷ್ಟೆ.


ಸೊದೋಮ್‍ಗೊಮೋರಗಳನ್ನು ಕೆಡವಿದಂತೆ ನಾನು ನಿಮ್ಮ ಅನೇಕ ಪಟ್ಟಣಗಳನ್ನು ಕೆಡವಲು ಉರಿಯಿಂದ ಎಳೆದ ಕೊಳ್ಳಿಯ ಹಾಗಿದ್ದಿರಿ; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು; ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.


ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿ ಬಿಡುವನು; ನಿನ್ನನ್ನು ಹಿಡಿದು ನಿವಾಸದೊಳಗಿಂದ ಕಿತ್ತುಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು. ಸೆಲಾ.


ಅವನು ಆ ಮನೆಯನ್ನು ಆತುಕೊಂಡರೆ ಅದು ನಿಲ್ಲುವದಿಲ್ಲ; ಅದನ್ನು ಹಿಡುಕೊಂಡರೆ ಅದು ಸ್ಥಿರವಾಗಿರದು.


ಮೂರ್ಖನು ಬೇರೂರುವದನ್ನು ನಾನು ನೋಡಿದೆನು; ಕೂಡಲೆ ಅವನ ನಿವಾಸವು ಶಾಪಗ್ರಸ್ತವೆನ್ನುವದಕ್ಕೆ ಆಸ್ಪದವಾಯಿತು.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು; ಯೆಹೋವನ ಮಾರ್ಗಗಳು ರುಜುವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಎಡವಿಬೀಳುವರು.


ಧರ್ಮವು ನಿರ್ದೋಷಿಯನ್ನು ಕಾಯುವದು; ಅಧರ್ಮವು ದೋಷಿಯನ್ನು ಕೆಡವಿಬಿಡುವದು.


ದೇವರು ಆ ಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ ಲೋಟನು ವಾಸವಾಗಿದ್ದ ಊರುಗಳನ್ನು ಕೆಡವಿದರೂ ಅಬ್ರಹಾಮನನ್ನು ನೆನಸಿ ಲೋಟನನ್ನು ತಪ್ಪಿಸಿ ಕಾಪಾಡಿದನು.


ದುಷ್ಟರ ವೃದ್ಧಿ ಪಾಪವೃದ್ಧಿ; ಶಿಷ್ಟರೋ ಅವರ ಪತನವನ್ನು ಕಣ್ಣಾರೆ ನೋಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು