Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:16 - ಕನ್ನಡ ಸತ್ಯವೇದವು J.V. (BSI)

16 ಜ್ಞಾನಮಾರ್ಗದಿಂದ ತಪ್ಪಿದವನಿಗೆ ಪ್ರೇತ ಸಮೂಹವೇ ವಿಶ್ರಾಂತಿಸ್ಥಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಜ್ಞಾನಮಾರ್ಗದಿಂದ ತಪ್ಪಿದವನಿಗೆ, ಪ್ರೇತಸಮೂಹವೇ ವಿಶ್ರಾಂತಿಸ್ಥಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬುದ್ಧಿಮಾರ್ಗ ಬಿಟ್ಟು ನಡೆದವನು ಪ್ರೇತಗಳ ನಡುವೆ ವಿಶ್ರಾಂತಿ ಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜ್ಞಾನದ ಮಾರ್ಗವನ್ನು ತೊರೆದವನು ನಾಶನದ ಕಡೆಗೆ ಹೋಗುತ್ತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ವಿವೇಕದ ಹಾದಿಯಿಂದ ತಪ್ಪಿಸಿಕೊಳ್ಳುವವನು ಸತ್ತವರ ಸಹವಾಸದಲ್ಲಿ ವಿಶ್ರಾಂತಿ ಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:16
20 ತಿಳಿವುಗಳ ಹೋಲಿಕೆ  

ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನಗೆ ಸಂತೋಷವಿರುವದಿಲ್ಲ ಎಂದು ಬರೆದದೆ.


ಯೆಹೋವನು ಡೊಂಕುದಾರಿಹಿಡಿದವರನ್ನು ಪಾತಕಿಗಳ ಗತಿಗೆ ಹೋಗಮಾಡಲಿ. ಇಸ್ರಾಯೇಲ್ಯರಿಗೆ ಶುಭವುಂಟಾಗಲಿ.


ಅವರು ಕುರಿಗಳಂತೆ ಪಾತಾಳದಲ್ಲಿ ದಟ್ಟವಾಗಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರಿಗೆ ನಿವಾಸವಿಲ್ಲದ ಹಾಗೆ ಪಾತಾಳವು ಅವರ ರೂಪವನ್ನು ನಾಶಮಾಡುವದು; ಉದಯಕಾಲದಲ್ಲಿ ಯಥಾರ್ಥರು ಅವರ ಮೇಲೆ ದೊರೆತನ ನಡಿಸುವರು.


ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು ನಿಮ್ಮ ಪ್ರೇಮಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ; ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ನೋಡಿಕೊಳ್ಳುವ ಕುರುಬರಾಗಿದ್ದಾರೆ. ಇವರು ಗಾಳಿಯಿಂದ ಹೊಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ, ಎಲೆಗಳುದುರಿ ಹಣ್ಣುಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ,


ಅವರು ನಮ್ಮನ್ನು ಬಿಟ್ಟು ಹೊರಟುಹೋದರು, ಆದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು, ಆದರೆ ಅವರು ನಮ್ಮನ್ನು ಬಿಟ್ಟುಹೋದದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲವೆಂಬದು ಸ್ಪಷ್ಟವಾಗಿ ತೋರಬಂತು.


ಆತನು ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಸಹ ಬದುಕಿಸಿದನು.


ಯೆಹೋವನನ್ನು ಆಶ್ರಯಿಸದೆ ಯೆಹೋವನ ದರ್ಶನವನ್ನು ಬಯಸದೆ ಯೆಹೋವನ ಮಾರ್ಗಬಿಟ್ಟವರನ್ನೂ ಧ್ವಂಸಪಡಿಸುವೆನು.


ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು; ಜ್ಞಾನಹೀನರ ಒಡನಾಡಿ ಸಂಕಟಪಡುವನು.


ಆ ಮನೆಯು ಪ್ರೇತನಿವಾಸವೆಂದೂ ಅವಳ ಅತಿಥಿಗಳು ಅಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು.


ಅವರಾದರೋ ಕತ್ತಲ ಹಾದಿಗಳನ್ನು ಹಿಡಿಯಬೇಕೆಂದು ಧರ್ಮಮಾರ್ಗಗಳನ್ನು ತೊರೆದುಬಿಡುವರು;


ಧರ್ಮನಿರತನಿಗೆ ಜೀವ, ಅಧರ್ಮಾಸಕ್ತನಿಗೆ ಮರಣ.


ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ದುಷ್ಟನು ನಡಿಸುವ ದುರಾಚಾರಗಳನ್ನೆಲ್ಲಾ ನಡಿಸಿದರೆ ಅವನು ಬಾಳುವನೋ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


ಸದುಪದೇಶದ ಕೊರತೆಯಿಂದಲೇ ಸಾಯುವನು, ತನ್ನ ಅತಿಮೂರ್ಖತನದಿಂದ ಭ್ರಾಂತನಾಗುವನು.


ಆಜ್ಞೆಯನ್ನು ಪಾಲಿಸುವವನು ಆತ್ಮವನ್ನು ಪಾಲಿಸುವನು, ನಡತೆಯನ್ನು ಲಕ್ಷಿಸದವನು ಸಾಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು