Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:24 - ಕನ್ನಡ ಸತ್ಯವೇದವು J.V. (BSI)

24 ಧರ್ಮನಿಂದಕನೆನಿಸಿಕೊಳ್ಳುವ ಸೊಕ್ಕೇರಿದ ಅಹಂಕಾರಿಯು ಗರ್ವಮದದಿಂದ ಪ್ರವರ್ತಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಧರ್ಮನಿಂದಕ” ಎನ್ನಿಸಿಕೊಳ್ಳುವವನು ಸೊಕ್ಕೇರಿದ ಅಹಂಕಾರಿಯಾಗಿ, ಗರ್ವ ಮತ್ತು ಮದದಿಂದ ಪ್ರವರ್ತಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸೊಕ್ಕೇರಿದ ಗರ್ವಿ ಕುಚೋದ್ಯನೆನಿಸಿಕೊಳ್ಳುವನು; ಅಹಂಕಾರ, ಮದಮತ್ಸರಗಳಿಂದ ಅವನು ವರ್ತಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಗರ್ವಿಷ್ಠನೂ ದುರಾಭಿಮಾನಿಯೂ ಆಗಿರುವವನಿಗೆ ಗೇಲಿಗಾರನೆಂದು ಹೆಸರು. ಅವನ ನಡತೆಯು ಗರ್ವದ ಮದದಿಂದ ಕೂಡಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಸೊಕ್ಕೇರಿ ಗರ್ವದಲ್ಲಿ ವರ್ತಿಸುವವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:24
15 ತಿಳಿವುಗಳ ಹೋಲಿಕೆ  

ಯಾವನು ದುಷ್ಟರ ಆಲೋಚನೆಯಂತೆ ನಡೆಯದೆ ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ ಧರ್ಮನಿಂದಕರೊಡನೆ ಕೂತುಕೊಳ್ಳದೆ


ಧರ್ಮನಿಂದಕರಿಗೆ [ದಂಡನೆಯ] ತೀರ್ಪು ಸಿದ್ಧ, ಮೂಢರ ಬೆನ್ನಿಗೆ ಪೆಟ್ಟು ಖಂಡಿತ.


ಭಂಗಕ್ಕೆ ಮೊದಲು ಗರ್ವದ ಹೃದಯ; ಮಾನಕ್ಕೆ ಮುಂಚೆ ದೈನ್ಯ.


ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವದಕ್ಕೆ ಎಷ್ಟು ಕಾಲ ಇಷ್ಟಪಡುವರು? ಜ್ಞಾನಹೀನರು ತಿಳುವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?


ಆಗ ಹೆರೋದನು ತನಗೆ ಜೋಯಿಸರು ಮೋಸ ಮಾಡಿದರೆಂದು ತಿಳಿದು ಬಹಳ ಸಿಟ್ಟಾಗಿ ಆಳುಗಳನ್ನು ಕಳುಹಿಸಿ ತಾನು ಜೋಯಿಸರಿಂದ ತಿಳುಕೊಂಡ ಕಾಲಕ್ಕೆ ಸರಿಯಾಗಿ, ಬೇತ್ಲೆಹೇವಿುನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಎರಡು ವರುಷದೊಳಗಿನ ಗಂಡುಕೂಸುಗಳನ್ನೆಲ್ಲಾ ಕೊಲ್ಲಿಸಿದನು.


ಮೋವಾಬ್ಯರಿಗೆ ಬಹು ಸೊಕ್ಕೇರಿದೆ ಎಂಬ ಅವರ ಹೆಮ್ಮೆಯ ಸುದ್ದಿಯೂ ಅವರ ಡಂಭ, ಅಹಂಕಾರ, ಸ್ವಾಭಿಮಾನ ಸ್ವಪ್ರತಿಷ್ಠೆ ಇವುಗಳ ಸಮಾಚಾರವೂ ನಮ್ಮ ಕಿವಿಗೆ ಬಿದ್ದಿವೆ.


ಮೋವಾಬ್ಯರಿಗೆ ಬಹು ಸೊಕ್ಕೇರಿದೆ ಎಂಬ ಅವರ ಹೆಮ್ಮೆಯ ಸುದ್ದಿಯೂ ಅವರ ಅಹಂಕಾರದಂಭ ಗರ್ವೋದ್ರೇಕ ಇವುಗಳ ಸಮಾಚಾರವೂ ನಮ್ಮ ಕಿವಿಗೆ ಬಿದ್ದಿವೆ. ಅವರು ಕೊಚ್ಚಿಕೊಳ್ಳುವದೆಲ್ಲಾ ಬರೀ ಬುರುಡೆಯೇ.


ಗರ್ವದಿಂದ ಭಂಗ; ಉಬ್ಬಿನಿಂದ ದೊಬ್ಬು.


ಯಾವವಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷರಕ್ತವನ್ನು ಸುರಿಸುವ ಕೈ,


ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುವನು.


ಮುರ್ಖನ ಸಂಕಲ್ಪವು ಪಾಪವೇ; ಧರ್ಮನಿಂದಕನು ಮನುಷ್ಯರಿಗೆ ಅಸಹ್ಯ.


ಏಕಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು,


ಅಲ್ಲದೆ ದ್ರಾಕ್ಷಾರಸವು ಮೋಸಕರವಾದ ಕಾರಣ ದುಷ್ಟನು ಮದವೇರಿದ್ದಾನೆ, ಸ್ವಸ್ಥಳದಲ್ಲಿ ನಿಲ್ಲನು; ಪಾತಾಳದ ಹಾಗೆ ಅತ್ಯಾಶೆಪಡುತ್ತಾನೆ, ಮೃತ್ಯುವಿನಂತಿದ್ದಾನೆ, ತೃಪ್ತಿಯೇ ಇಲ್ಲ; ಸಕಲ ಜನಗಳನ್ನು ಎಳೆದುಕೊಳ್ಳುತ್ತಾನೆ, ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು