Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:25 - ಕನ್ನಡ ಸತ್ಯವೇದವು J.V. (BSI)

25 ಸೋಮಾರಿಯ ಆಶೆಯು ಅವನನ್ನು ಕೊಲ್ಲುವದು, ಅವನ ಕೈಗಳು ದುಡಿಯಲೊಲ್ಲವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸೋಮಾರಿಯ ಆಶೆಯು ಅವನನ್ನು ಕೊಲ್ಲುವುದು, ಅವನ ಕೈಗಳು ದುಡಿಯಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಮೈಗಳ್ಳನನ್ನು ಕೊಲ್ಲುವುದು ಅವನ ಇಚ್ಛೆಯೆ; ಬಗ್ಗದು ಅವನ ಕೈ ದುಡಿಮೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸೋಮಾರಿಯ ಆಸೆ ಅವನನ್ನು ಉಪವಾಸದಿಂದ ಸಾಯಿಸುವುದು, ಯಾಕೆಂದರೆ ಅವನು ದುಡಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಸೋಮಾರಿಯ ಆಸೆಯು ಅವನನ್ನು ಕೊಲ್ಲುತ್ತದೆ; ಅವನ ಕೈಗಳು ದುಡಿಯುವುದಕ್ಕೆ ನಿರಾಕರಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:25
13 ತಿಳಿವುಗಳ ಹೋಲಿಕೆ  

ಸೋಮಾರಿಯ ಆಶೆಯು ವ್ಯರ್ಥ; ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.


ಚುರುಕುಗೈಯವನಿಗೆ ರಾಜ್ಯಾಧಿಕಾರ; ಮೈಗಳ್ಳನಿಗೆ ಬಿಟ್ಟಿಯ ಬದುಕು.


ಆಗ ಅವನ ಧಣಿಯು ಅವನಿಗೆ - ಮೈಗಳ್ಳನಾದ ಕೆಟ್ಟ ಆಳು ನೀನು; ನಾನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿಯಾ?


ವಿವೇಕದಿಂದ ಉತ್ತರಕೊಡಬಲ್ಲ ಏಳು ಜನರಿಗಿಂತಲೂ ತಾನೇ ಜ್ಞಾನಿಯೆಂದು ಸೋಮಾರಿಯು ಎಣಿಸಿಕೊಳ್ಳುವನು.


ಮೈಗಳ್ಳನು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ ತಿರಿಗಿ ಬಾಯ ಹತ್ತಿರಕ್ಕೆ ತರಲಾರನು.


ಸೋಮಾರಿಯ ದಾರಿ ಮುಳ್ಳುಬೇಲಿ; ಯಥಾರ್ಥವಂತನ ಮಾರ್ಗ ರಾಜಮಾರ್ಗ.


ಮೈಗಳ್ಳನು ಹಿಡಿದ ಬೇಟೆಯನ್ನೂ ಬೇಯಿಸನು; ಚಟುವಟಿಕೆಯವನಿಗೆ ಅಮೂಲ್ಯಸಂಪತ್ತು ದೊರಕುವದು.


ಮೈಗಳ್ಳನು ಮಳೆಗಾಲದಲ್ಲಿ ಹೊಲಗೇಯನು; ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?


ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ತಿರುಗಾಡುತ್ತಿದೆ ಎಂಬದು ಸೋಮಾರಿಯ ನೆವ.


ಹೊರಗೆ ಸಿಂಹವಿದೆ, ನನ್ನನ್ನು ಬೀದಿಯಲ್ಲಿ ಕೊಂದೀತು ಎಂಬದು ಸೋಮಾರಿಯ ನೆವ.


ಹಿಂದಿರುಗಿ ಬಂದು ಯೆಹೋಶುವನಿಗೆ - ಎಲ್ಲಾ ಜನರು ಹೋಗುವದು ಅವಶ್ಯವಿಲ್ಲ; ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರು ಪಟ್ಟಣವನ್ನು ಜಯಿಸಬಹುದು. ಎಲ್ಲರನ್ನೂ ಕಳುಹಿಸಿ ಸುಮ್ಮನೆ ದಣಿಸುವದೇಕೆ? ಅವರು ಸ್ವಲ್ಪ ಮಂದಿ ಮಾತ್ರ ಇರುತ್ತಾರೆ ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು