Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:27 - ಕನ್ನಡ ಸತ್ಯವೇದವು J.V. (BSI)

27 ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವದು ಮತ್ತೂ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವುದು ಮತ್ತೂ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ದುಷ್ಟರು ಅರ್ಪಿಸುವ ಬಲಿಯಜ್ಞ ಅಸಹ್ಯ; ದುರಾಲೋಚನೆಯಿಂದ ಅರ್ಪಿಸುವುದು ಮತ್ತೂ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಕೆಡುಕನ ಯಜ್ಞಗಳು ಯೆಹೋವನಿಗೆ ಅಸಹ್ಯ. ಯಾಕೆಂದರೆ ಅವು ದುರುದ್ದೇಶದಿಂದ ಕೂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ದುಷ್ಟರ ಯಜ್ಞವು ಅಸಹ್ಯ; ಅದನ್ನು ದುರ್ಬುದ್ಧಿಯಿಂದ ಅರ್ಪಿಸಿದರೆ, ಇನ್ನೂ ಎಷ್ಟೋ ಅಸಹ್ಯಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:27
14 ತಿಳಿವುಗಳ ಹೋಲಿಕೆ  

ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.


ನೀವು ಶೆಬದ ಧೂಪವನ್ನೂ ದೂರದೇಶದ ಒಳ್ಳೆ ಬಜೆಯನ್ನೂ ನನಗೆ ಅರ್ಪಿಸುವದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಲ್ಲ.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕರಾಜ್ಯದ ಬಾಗಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ; ನೀವಂತೂ ಒಳಕ್ಕೆ ಹೋಗುವದಿಲ್ಲ, ಒಳಕ್ಕೆ ಹೋಗಬೇಕೆಂದಿರುವವರನ್ನೂ ಹೋಗಗೊಡಿಸುವದಿಲ್ಲ.


ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.


ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವದು ಲೇಸು; ತಾವು ಮಾಡುವದು ಅಧರ್ಮವೆಂದು ಮೂಢರಿಗೆ ಗೊತ್ತೇ ಇಲ್ಲ.


ಅದಕ್ಕೆ ಮೋಶೆ ಬಹು ಕೋಪಗೊಂಡು ಯೆಹೋವನಿಗೆ - ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ ಎಂದು ಮನವಿಮಾಡಿದನು.


ಎಲೈ, ಈ ದಿವಸ ನನ್ನ ಹರಿಕೆಗಳನ್ನು ಸಲ್ಲಿಸಿದ್ದೇನೆ, ಸಮಾಧಾನಯಜ್ಞಶೇಷವು ನನ್ನಲ್ಲಿದೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು