Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:29 - ಕನ್ನಡ ಸತ್ಯವೇದವು J.V. (BSI)

29 ದುಷ್ಟನ ಮುಖದಲ್ಲಿ ಲಜ್ಜೆಯಿಲ್ಲ; ಸತ್ಯವಂತನು ತನ್ನ ನಡತೆಯನ್ನು ಸರಿಪಡಿಸಿಕೊಳ್ಳುತ್ತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದುಷ್ಟನ ಮುಖದಲ್ಲಿ ಲಜ್ಜೆಯಿಲ್ಲ, ಸತ್ಯವಂತನು ತನ್ನ ನಡತೆಯನ್ನು ಸರಿಪಡಿಸಿಕೊಳ್ಳುತ್ತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ದುಷ್ಟನ ಮುಖದಲ್ಲಿ ಹಟಭಾವನೆ; ಸಜ್ಜನನ ನಡತೆಯಲ್ಲಿ ಸದೃಢತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ದುಷ್ಟರು ನಾಚಿಕೆಯಿಲ್ಲದೆ ವರ್ತಿಸುವರು; ಆದರೆ ಒಳ್ಳೆಯವನು ತನ್ನ ಮಾರ್ಗಗಳ ಬಗ್ಗೆ ಎಚ್ಚರಿಕೆಯಿಂದ ಯೋಚಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ದುಷ್ಟನು ತನ್ನ ಮುಖವನ್ನು ಕಠಿಣ ಮಾಡಿಕೊಳ್ಳುತ್ತಾನೆ; ಯಥಾರ್ಥವಂತನಾದರೋ ತನ್ನ ಮಾರ್ಗಗಳನ್ನು ಯೋಚಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:29
20 ತಿಳಿವುಗಳ ಹೋಲಿಕೆ  

ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವದು; ದೋಷಿಯು ತನ್ನ ದೋಷದಿಂದಲೇ ಬಿದ್ದುಹೋಗುವನು.


ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸುವೂ ನಮಗೆ ನಿಮ್ಮ ಬಳಿಗೆ ಬರುವದಕ್ಕೆ ಮಾರ್ಗವನ್ನು ಸರಾಗಮಾಡಲಿ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.


ಅವನು ಯೋಚಿಸಿ ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದರಿಂದ ಸಾಯನು, ಬಾಳೇ ಬಾಳುವನು.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


ಭಯದಿಂದ ನಡೆದುಕೊಳ್ಳುವವನು ಧನ್ಯನು; ಕಠಿನಹೃದಯನು ಕೇಡಿಗೆ ಸಿಕ್ಕಿಬೀಳುವನು.


ನನ್ನ ನಡತೆಯನ್ನು ಶೋಧಿಸಿದೆನು. ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಕೊಂಡಿದ್ದೇನೆ.


ನಿನ್ನ ನಿಬಂಧನೆಗಳನ್ನು ಕೈಕೊಳ್ಳುವದರಲ್ಲಿ ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇದು!


ಯೆಹೋವನ ಆಲಯನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ;


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ; ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇಹೋಗುವರು ಎಂದು ಯೆಹೋವನು ಅನ್ನುತ್ತಾನೆ.


ಬಹಳವಾಗಿ ಗದರಿಸಿದರೂ ತಗ್ಗದವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ಈ ಸಮಯದಲ್ಲಿ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.


ಅವನನ್ನು ಹಿಡಿದು ಮುದ್ದಾಡಿ ನಾಚಿಕೆಗೆಟ್ಟವಳಾಗಿ -


ಜ್ಞಾನಿಯ ಹಾಗಿರುವವನು ಯಾರು? ವಿಷಯವನ್ನು ವಿವರಿಸಬಲ್ಲವರು ಯಾರು? ಜ್ಞಾನದಿಂದ ಒಬ್ಬನ ಮುಖವು ಪ್ರಕಾಶಗೊಳ್ಳುವದು.


ನೆಟ್ಟಗೆ ದೃಷ್ಟಿಸು; ನಿನ್ನ ಕಣ್ಣುಗಳು ನಿನ್ನ ಮುಂದೆಯೇ ಇರಲಿ.


ನೀನು ನಡೆಯುವ ದಾರಿಯನ್ನು ಸಮಮಾಡು; ನಿನ್ನ ಮಾರ್ಗಗಳೆಲ್ಲಾ ದೃಢವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು