Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:6 - ಕನ್ನಡ ಸತ್ಯವೇದವು J.V. (BSI)

6 ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ [ನಾಶಕರ].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ ನಾಶಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹಬೆಯಂತೆ ನಾಪತ್ತೆ ಸುಳ್ಳಿನಿಂದ ಸಿಕ್ಕಿದ ಸಂಪತ್ತು; ಮೃತ್ಯುಪಾಶದಂತೆ ಅದೊಂದು ವಿಪತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀನು ಮೋಸದಿಂದ ಐಶ್ವರ್ಯವಂತನಾದರೆ, ಆ ಐಶ್ವರ್ಯವು ಬಹುಬೇಗನೆ ಇಲ್ಲವಾಗುತ್ತದೆ. ನಿನ್ನ ಐಶ್ವರ್ಯವು ನಿನ್ನನ್ನು ಮರಣಕ್ಕೆ ನಡೆಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸುಳ್ಳಿನ ನಾಲಿಗೆಯಿಂದ ಸಂಪಾದಿಸಿದ ಸಂಪತ್ತು ಕ್ಷಣಿಕ ಆವಿಯಂತೆಯೂ ಮೃತ್ಯುಪಾಶದಂತೆಯೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:6
12 ತಿಳಿವುಗಳ ಹೋಲಿಕೆ  

ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವದು; ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವದು.


ದುರ್ದ್ರವ್ಯವು ವ್ಯರ್ಥ; ಧರ್ಮವು ಮೃತ್ಯುವಿನಿಂದ ರಕ್ಷಕ.


ಮೊದಲು ಬೇಗನೆ ಬಾಚಿಕೊಂಡ ಸ್ವಾಸ್ತ್ಯವು ಕೊನೆಯಲ್ಲಿ ಶುಭವನ್ನು ಹೊಂದದು.


ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು; ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು.


ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.


ನನ್ನಿಂದ ಕಪಟವನ್ನೂ ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.


ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು; ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವದು.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಲೋಕಾದಿಯಿಂದ ಅಂಥವರಿಗೆ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವದು, ಅವರ ನಾಶವು ತೂಕಡಿಸುವದಿಲ್ಲ.


ಕೊಳ್ಳುವವನು - ಚೆನ್ನಾಗಿಲ್ಲ, ಚೆನ್ನಾಗಿಲ್ಲ ಎಂದು ಹೇಳುತ್ತಾನೆ. ಕೊಂಡುಕೊಂಡು ಹೋಗಿ ಹೆಚ್ಚಳ ಪಡುತ್ತಾನೆ.


ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.


ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನಮಾಡಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಲೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು