Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:7 - ಕನ್ನಡ ಸತ್ಯವೇದವು J.V. (BSI)

7 ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ ಅವರ ಬಲಾತ್ಕಾರವು ಅವರನ್ನೇ ಎಳೆದುಕೊಂಡು ಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ, ಅವರ ಬಲಾತ್ಕಾರವು ಅವರನ್ನೇ ಎಳೆದುಕೊಂಡು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ, ಅವರನ್ನೇ ಎಳೆದೊಯ್ಯುವುದು ಅವರ ಹಿಂಸಾಚಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕೆಡುಕರು ಕೊಡುವ ಹಿಂಸೆಯು ಅವರನ್ನೇ ನಾಶಮಾಡುತ್ತದೆ; ಯಾಕೆಂದರೆ ಒಳ್ಳೆಯದನ್ನು ಮಾಡಲು ಅವರು ಒಪ್ಪುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದುಷ್ಟರ ಹಿಂಸೆಯು ಅವರನ್ನು ನಾಶಪಡಿಸುವುದು; ಏಕೆಂದರೆ ನ್ಯಾಯವಾದದ್ದನ್ನು ಮಾಡುವುದನ್ನು ಅವರು ನಿರಾಕರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:7
15 ತಿಳಿವುಗಳ ಹೋಲಿಕೆ  

ನೀತಿ ಕೃಪೆಗಳನ್ನು ಹುಡುಕುವವನು ನೀತಿ ಜೀವಕೀರ್ತಿಗಳನ್ನು ಪಡೆಯುವನು.


ಹುರುಳಿಲ್ಲದ ಮಾತುಗಳನ್ನಾಡುವವರಿಗೆ ಕಿವಿಗೊಟ್ಟು ಮೋಸಹೋಗಬೇಡಿರಿ; ಅಂಥ ಕೃತ್ಯಗಳ ನಿವಿುತ್ತದಿಂದ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.


ಇವನ ತಂದೆಯೋ ಸ್ವಕುಲದವರನ್ನು ಬಹಳವಾಗಿ ಅರೆದು ಸುಲಿದು ಸ್ವಜನರ ನಡುವೆ ಕೆಟ್ಟದನ್ನು ನಡಿಸಿದ ಕಾರಣ ಇಗೋ, ತನ್ನ ಅಧರ್ಮದಿಂದಲೇ ಸಾಯುವನು.


ಮತ್ತು ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ಎಸೆದುಬಿಟ್ಟ ಹಾಗೆ ನಿಮ್ಮನ್ನೂ ನನ್ನ ಕಣ್ಣೆದುರಿನಿಂದ ಎಸೆದುಬಿಡುವೆನು.


ಶಿಷ್ಟನ ತಲೆ ಆಶೀರ್ವಾದದ ನೆಲೆ; ದುಷ್ಟನ ಬಾಯಿಗೆ ಬಲಾತ್ಕಾರವೇ ಮುಚ್ಚಳ.


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ.


ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ಬುರುಡೆಯ ಮೇಲೆ ಬೀಳುವದು.


ನ್ಯಾಯವನ್ನು ಕಹಿಮಾಡುವವರೇ, ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು