Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:12 - ಕನ್ನಡ ಸತ್ಯವೇದವು J.V. (BSI)

12 ಯೆಹೋವನ ಕಣ್ಣು ತಿಳುವಳಿಕೆಗೆ ಕಾವಲು; ಆತನು ವಂಚಕನ ಮಾತುಗಳನ್ನು ಕೆಡವಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನ ಕಣ್ಣು ತಿಳಿವಳಿಕೆಗೆ ಕಾವಲು, ಆತನು ವಂಚಕನ ಮಾತುಗಳನ್ನು ಕೆಡವಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರನ ದೃಷ್ಟಿ ಸಜ್ಜನರನ್ನು ಕಾಯುವುದು; ವಂಚಕರ ಮಾತನ್ನು ನಿರರ್ಥಕಗೊಳಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ಜ್ಞಾನಿಗಳ ಮೇಲೆ ಲಕ್ಷ್ಯವಿಟ್ಟು ಕಾಪಾಡುವನು; ವಂಚಕರ ಮಾತುಗಳನ್ನಾದರೋ ನಾಶಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರ ಕಣ್ಣುಗಳು ತಿಳುವಳಿಕೆಯನ್ನು ಕಾಯುತ್ತವೆ; ಅವರು ದ್ರೋಹಿಯ ಮಾತುಗಳನ್ನು ಕೆಡವಿ ಹಾಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:12
17 ತಿಳಿವುಗಳ ಹೋಲಿಕೆ  

ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಟಿಯನ್ನು ಪ್ರಸರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿದ್ದೀ; ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುವವು ಎಂದು ಹೇಳಿದನು.


ಅವನು ತೆಗೆದುಬಿಡಲ್ಪಟ್ಟ ಕೂಡಲೆ ಆ ಅಧರ್ಮಸ್ವರೂಪನು ಕಾಣಬರುವನು; ಅವನನ್ನು ಯೇಸು ಕರ್ತನು ತನ್ನ ಬಾಯ ಉಸುರಿನಿಂದ ಕೊಲ್ಲುವನು, ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ಸಂಹರಿಸುವನು.


ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವದಕ್ಕೆ ನಿಮ್ಮಿಂದ ಆಗುವದಿಲ್ಲ. ನೀವು ಒಂದು ವೇಳೆ ದೇವರ ಮೇಲೆ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.


ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ; ವಂಚಕರಿಗೆ ವಕ್ರತೆಯು ನಾಶಕ.


ಹೃದಯಶುದ್ಧಿಯನ್ನಪೇಕ್ಷಿಸುವ ಸವಿಮಾತಾಡುವ ಮನುಷ್ಯನಿಗೆ ರಾಜನ ಸ್ನೇಹವು ದೊರೆಯುವದು.


ಹೊರಗೆ ಸಿಂಹವಿದೆ, ನನ್ನನ್ನು ಬೀದಿಯಲ್ಲಿ ಕೊಂದೀತು ಎಂಬದು ಸೋಮಾರಿಯ ನೆವ.


ದೇವರ ಮನುಷ್ಯನು ಇಸ್ರಾಯೇಲ್ಯರ ಅರಸನಿಗೆ - ಜಾಗರೂಕತೆಯಿಂದಿರ್ರಿ; ನೀವು ಇಂಥಿಂಥ ಸ್ಥಳದಲ್ಲಿ ಹಾಯಬಾರದು, ಅಲ್ಲಿ ಅರಾಮ್ಯರು ಅಡಗಿಕೊಂಡಿದ್ದಾರೆ ಎಂದು ತಿಳಿಸುತ್ತಿದ್ದನು.


ನಾವಾದರೋ ನಮ್ಮ ದೇವರಿಗೆ ಮೊರೆಯಿಟ್ಟು ಅವರಿಗೆ ವಿರುದ್ಧವಾಗಿ ಅವರು ಬರುವ ದಾರಿಯಲ್ಲಿ ಹಗಲಿರುಳು ಕಾವಲಿಟ್ಟೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು