Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:14 - ಕನ್ನಡ ಸತ್ಯವೇದವು J.V. (BSI)

14 ಜಾರಸ್ತ್ರೀಯ ಬಾಯಿ ಆಳವಾದ ಹಳ್ಳ; ಯೆಹೋವನಿಗೆ ಸಿಟ್ಟನ್ನೆಬ್ಬಿಸಿದವನು ಅದರಲ್ಲಿ ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಜಾರಸ್ತ್ರೀಯ ಬಾಯಿ ಆಳವಾದ ಹಳ್ಳ, ಯೆಹೋವನಿಗೆ ಸಿಟ್ಟನ್ನೆಬ್ಬಿಸಿದವನು ಅದರಲ್ಲಿ ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ವ್ಯಭಿಚಾರಿಣಿಯ ಬಾಯಿ ಆಳವಾದ ಬಾವಿ; ಸರ್ವೇಶ್ವರನಿಗೆ ಸಿಟ್ಟೆಬ್ಬಿಸಿದವನು ಬೀಳುವನು ಅದರಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕಾಮುಕಿಯ ಬಾಯಿ ಆಳವಾದ ಗುಂಡಿಯಂತಿದೆ. ಯೆಹೋವನಿಂದ ಶಪಿಸಲ್ಪಟ್ಟವರು ಆ ಗುಂಡಿಯೊಳಗೆ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ವ್ಯಭಿಚಾರಿಣಿಯ ಬಾಯಿ ಆಳವಾದ ಬಾವಿ; ಯೆಹೋವ ದೇವರಿಗೆ ಸಿಟ್ಟನ್ನು ಎಬ್ಬಿಸುವವನು ಅದರಲ್ಲಿ ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:14
10 ತಿಳಿವುಗಳ ಹೋಲಿಕೆ  

ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು, ಯಾವದಂದರೆ, ಕೆಟ್ಟ ಹೆಂಗಸೇ. ಅವಳು ಬೋನು, ಅವಳ ಹೃದಯ ಬಲೆ, ಅವಳ ಕೈ ಪಾಶ; ದೇವರು ಒಲಿದವನು ಇವಳಿಂದ ತಪ್ಪಿಸಿಕೊಳ್ಳುವನು; ಪಾಪಿಯೋ ಅವಳ ಕೈಗೆ ಸಿಕ್ಕಿಬೀಳುವನು.


ಸೂಳೆಯು ಆಳವಾದ ಹಳ್ಳ, ಜಾರಸ್ತ್ರೀಯು ಇಕ್ಕಟ್ಟಾದ ಗುಂಡಿ.


ಅಂಥ ಸ್ತ್ರೀಯರ ದೆಸೆಯಿಂದ ಇಸ್ರಾಯೇಲ್‍ರಾಜನಾದ ಸೊಲೊಮೋನನು ದೋಷಿಯಾದನಲ್ಲವೇ. ಅನೇಕಾನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ; ಅವನು ತನ್ನ ದೇವರಿಗೆ ವಿಶೇಷ ಪ್ರಿಯನು; ಆದದರಿಂದ ದೇವರು ಅವನನ್ನು ಎಲ್ಲಾ ಇಸ್ರಾಯೇಲ್ಯರ ಮೇಲೆ ಅರಸನನ್ನಾಗಿ ನೇವಿುಸಿದನು. ಆದರೂ ಅನ್ಯದೇಶಸ್ತ್ರೀಯರು ಅವನನ್ನು ಪಾಪದಲ್ಲಿ ಬೀಳಿಸಿದರು.


ಆದದರಿಂದ - ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಸಡಿಲ ಬಿಟ್ಟೆನು.


ಯೆಹೋವನು ಇದನ್ನು ಕಂಡು ಅವರ ವಿಷಯದಲ್ಲಿ ಬೇಸರಗೊಂಡನು; ತನ್ನ ಕುಮಾರ ಕುಮಾರ್ತೆಗಳ ವಿಷಯದಲ್ಲಿ ವ್ಯಥೆಪಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು