Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:17 - ಕನ್ನಡ ಸತ್ಯವೇದವು J.V. (BSI)

17 ಕಿವಿಗೊಟ್ಟು ಜ್ಞಾನಿಗಳ ಮಾತುಗಳನ್ನು ಕೇಳು; ನನ್ನ ಜ್ಞಾನಬೋಧೆಗೆ ಮನಸ್ಸಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕಿವಿಗೊಟ್ಟು ಜ್ಞಾನಿಗಳ ಮಾತುಗಳನ್ನು ಕೇಳು, ನನ್ನ ಜ್ಞಾನಬೋಧೆಗೆ ಮನಸ್ಸು ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಜ್ಞಾನಿಗಳ ನುಡಿಗಳನ್ನು ಕಿವಿಗೊಟ್ಟು ಕೇಳು; ನನ್ನ ಬೋಧನೆಯನ್ನು ಮನಸ್ಸಿನಲ್ಲಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನನ್ನ ಉಪದೇಶಗಳಿಗೆ ಕಿವಿಗೊಡು. ಜ್ಞಾನಿಗಳ ಉಪದೇಶವನ್ನೇ ನಾನು ನಿನಗೆ ಉಪದೇಶಿಸುವೆನು. ಈ ಉಪದೇಶಗಳಿಂದ ಕಲಿತುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಜ್ಞಾನಿಗಳ ಮಾತುಗಳನ್ನು ಕಿವಿಗೊಟ್ಟು ಕೇಳು; ನನ್ನ ಬೋಧನೆಯನ್ನು ನಿನ್ನ ಹೃದಯವು ಅನ್ವಯಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:17
16 ತಿಳಿವುಗಳ ಹೋಲಿಕೆ  

ಉಪದೇಶವನ್ನು ಮನಸ್ಸಿಗೆ ತೆಗೆದುಕೋ; ತಿಳುವಳಿಕೆಯ ಮಾತುಗಳಿಗೆ ಕಿವಿಗೊಡು.


ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ನಡಿಸು.


ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು; ಆಗ ಜ್ಞಾನದ ಹೃದಯವನ್ನು ಪಡಕೊಳ್ಳುವೆವು.


ನಾನು ತಿರುಗಿಕೊಂಡು ಜ್ಞಾನವನ್ನೂ ಮೂಲತತ್ವವನ್ನೂ ಹುಡುಕಿ ವಿಚಾರಿಸಿ ಗ್ರಹಿಸುವದಕ್ಕೂ ಅಧರ್ಮವು ಮೂಢತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳುವದಕ್ಕೂ ಮನಸ್ಸಿಟ್ಟೆನು.


ವಿವೇಕಮಾರ್ಗದಲ್ಲಿ ಅಂದರೆ ನೀತಿನ್ಯಾಯಧರ್ಮಗಳಲ್ಲಿ ಶಿಕ್ಷಿತರಾಗುವರು.


ಹೀಗೆ ಮಾತಾಡುತ್ತಿರುವಾಗಲೇ ಕಾಂತಿಯುಳ್ಳ ಮೋಡವು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿಂದ - ಈತನು ಪ್ರಿಯನಾಗಿರುವ ನನ್ನ ಮಗನು; ಈತನನ್ನು ನಾನು ಮೆಚ್ಚಿದ್ದೇನೆ; ಈತನ ಮಾತನ್ನು ಕೇಳಿರಿ ಎಂಬ ಆಕಾಶವಾಣಿ ಆಯಿತು.


ಒಬ್ಬನು ಮತ್ತೊಬ್ಬನ ಮೇಲೆ ಅಧಿಕಾರ ನಡಿಸಿ ಅವನಿಗೆ ಹಾನಿಯನ್ನುಂಟುಮಾಡುವ ಈ ಕಾಲದಲ್ಲಿ ಇದನ್ನೆಲ್ಲಾ ನೋಡಿ ಲೋಕದೊಳಗೆ ನಡೆಯುವ ಸಕಲ ಕಾರ್ಯಗಳನ್ನೂ ಪರಿಶೀಲಿಸಿದ್ದೇನೆ.


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ರಾತ್ರಿ ಹಗಲು ಮನುಷ್ಯರ ಕಣ್ಣುಗಳಿಗೆ ನಿದ್ರೆ ಹತ್ತಗೊಡದ ಲೋಕದ ಶ್ರಮೆಯನ್ನು ನೋಡಲೂ ಜ್ಞಾನವನ್ನು ಪಡೆಯಲೂ ನಾನು ಮನಸ್ಸಿಟ್ಟಾಗ


ಇವು ಕೂಡ ಜ್ಞಾನಿಗಳ ಉಕ್ತಿಗಳೇ: - ನ್ಯಾಯವಿಚಾರಣೆಯಲ್ಲಿ ಪಕ್ಷಪಾತವು ಧರ್ಮವಲ್ಲ.


ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು; ಸಂಗ್ರಹವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು; ಒಬ್ಬನೇ ಕರ್ತನಿಂದ ಬಂದಿವೆ.


ನನ್ನ ಜನರೇ, ನನ್ನ ಉಪದೇಶಕ್ಕೆ ಕಿವಿಗೊಡಿರಿ; ನನ್ನ ನುಡಿಗಳನ್ನು ಲಾಲಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು