Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:2 - ಕನ್ನಡ ಸತ್ಯವೇದವು J.V. (BSI)

2 ಬಡವರು ಬಲ್ಲಿದರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಬಡವರು ಮತ್ತು ಸಿರಿವಂತರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಬಡವರು ಬಲ್ಲಿದರು ಸ್ಥಿತಿಯಲ್ಲಿ ಎದುರುಬದುರು; ಅವರೆಲ್ಲರನ್ನು ಸೃಷ್ಟಿಸಿದಾತ ಸರ್ವೇಶ್ವರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಐಶ್ವರ್ಯವಂತರಿಗೂ ಬಡವರಿಗೂ ಯಾವ ವ್ಯತ್ಯಾಸವಿಲ್ಲ. ಯಾಕೆಂದರೆ ಎಲ್ಲರನ್ನು ನಿರ್ಮಿಸಿದಾತನು ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಧನಿಕರು, ಬಡವರು ಇದನ್ನು ಸಾಮಾನ್ಯವಾಗಿ ಹೊಂದಿರುವರು: ಇವರೆಲ್ಲರನ್ನು ಸೃಷ್ಟಿಸಿದಾತ ಯೆಹೋವ ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:2
9 ತಿಳಿವುಗಳ ಹೋಲಿಕೆ  

ನನ್ನನ್ನು ಗರ್ಭದಲ್ಲಿ ನಿರ್ಮಿಸಿದಾತನೇ ಅವನನ್ನೂ ನಿರ್ಮಿಸಲಿಲ್ಲವೋ? ಆತನೊಬ್ಬನೇ ನಮ್ಮಿಬ್ಬರನ್ನೂ ಹೊಟ್ಟೆಯಲ್ಲಿ ರೂಪಿಸಿದನಲ್ಲವೇ.


ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು; ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.


ಬಡತನ ಸಿರಿತನಗಳನ್ನು ಕೊಡುವವನೂ ತಗ್ಗಿಸುವವನೂ ಹೆಚ್ಚಿಸುವವನೂ ಯೆಹೋವನೇ.


ತಗ್ಗುವವನು ತಗ್ಗಿಸುವವನು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ; ಯೆಹೋವನೇ ಅವರಿಬ್ಬರ ಕಣ್ಣುಗಳಿಗೆ ಕಳೆಕೊಟ್ಟವನು.


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.


ಕಣ್ಣು ಕೈಗೆ - ನೀನು ನನಗೆ ಅವಶ್ಯವಿಲ್ಲವೆಂದೂ, ತಲೆಯು ಕಾಲುಗಳಿಗೆ - ನೀವು ನನಗೆ ಅವಶ್ಯವಿಲ್ಲವೆಂದೂ ಹೇಳುವದಕ್ಕಾಗುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು