Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:22 - ಕನ್ನಡ ಸತ್ಯವೇದವು J.V. (BSI)

22 ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆ ಮಾಡಬೇಡ; ನ್ಯಾಯಸ್ಥಾನದಲ್ಲಿ ದರಿದ್ರರನ್ನು ತುಳಿಯದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆ ಮಾಡಬೇಡ, ನ್ಯಾಯಸ್ಥಾನದಲ್ಲಿ ದರಿದ್ರರನ್ನು ತುಳಿಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಬಡವರಿಗೆ ದಿಕ್ಕಿಲ್ಲವೆಂದು ಅವರನ್ನು ಶೋಷಣೆಗೆ ಗುರಿಮಾಡಬೇಡ; ನ್ಯಾಯಾಲಯದಲ್ಲಿ ಆ ದಟ್ಟದರಿದ್ರರನ್ನು ಬಾಧಿಸಬೇಡ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅಸಹಾಯಕರಾದ ಬಡವರಿಂದ ಕದ್ದುಕೊಳ್ಳಬೇಡ; ನ್ಯಾಯಾಲಯದಲ್ಲಿ ಅವರಿಗೆ ಅನ್ಯಾಯಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆಮಾಡಬೇಡ; ನ್ಯಾಯಾಲಯದಲ್ಲಿ ದರಿದ್ರರನ್ನು ತುಳಿಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:22
15 ತಿಳಿವುಗಳ ಹೋಲಿಕೆ  

ಒಬ್ಬರಿಗೊಬ್ಬರು ಪ್ರೀತಿ ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರ, ಇವರಾರಿಗೂ ಅನ್ಯಾಯ ಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ,


ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ ಬಲ್ಲಿದರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.


ನಿಮ್ಮಲ್ಲಿರುವ ಬಡವರು ವ್ಯಾಜ್ಯವಾಡಿದಾಗ ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು. ಮೋಸದ ಕಾರ್ಯಕ್ಕೆ ದೂರವಾಗಿರಬೇಕು.


ನ್ಯಾಯಸ್ಥಾನದಲ್ಲಿ ನನಗೆ ಸಹಾಯ ಉಂಟೆಂದು ಅನಾಥನ ಮೇಲೆ ಕೈಮಾಡಿದೆನೋ?


ನಾನು ಬಡವರ ಇಷ್ಟವನ್ನು ಭಂಗಪಡಿಸಿ ವಿಧವೆಯನ್ನು ಕಂಗೆಡಿಸಿದೆನೋ?


ಸಾಧಾರಣರು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ ವಿದೇಶಿಗಳನ್ನು ಅನ್ಯಾಯವಾಗಿ ಅರೆದು ಬಿಟ್ಟಿದ್ದಾರೆ.


ಆದದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು.


ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಇಷ್ಟವಾಗಿದೆಯೋ ಅಲ್ಲೇ ಅವನು ವಾಸವಾಗಿರಬಹುದು; ನಿರ್ಬಂಧಪಡಿಸಬಾರದು.


ಅದಲ್ಲದೆ ಬಡವನನ್ನು ಕರುಣಿಸಿ ಪಕ್ಷಪಾತದಿಂದ ತೀರ್ಮಾನ ಮಾಡಬಾರದು.


ಮತ್ತೊಬ್ಬನನ್ನು ಬಲಾತ್ಕರಿಸಬಾರದು; ಅವನ ಸೊತ್ತನ್ನು ಅಪಹರಿಸಬಾರದು. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲಿ ಇಟ್ಟುಕೊಳ್ಳಬಾರದು.


ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ ಅವರ ಬಲಾತ್ಕಾರವು ಅವರನ್ನೇ ಎಳೆದುಕೊಂಡು ಹೋಗುವದು.


ಅನ್ಯಾಯವಾದ ತೀರ್ಪುಗಳನ್ನು ತೀರಿಸಿ ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು