Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:8 - ಕನ್ನಡ ಸತ್ಯವೇದವು J.V. (BSI)

8 ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು; ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕೆಟ್ಟತನವನ್ನು ಬಿತ್ತುವವನು ಕೇಡನ್ನೆ ಕೊಯ್ಯುವನು; ಅವನ ಸಿಟ್ಟು ಅವನನ್ನೆ ಸುಟ್ಟುಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಕೇಡನ್ನು ಬಿತ್ತುವವನು ಕೇಡನ್ನು ಕೊಯ್ಯುವನು. ಅವನ ದುಷ್ಟಶಕ್ತಿಯು ನಾಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕೆಟ್ಟತನವನ್ನು ಬಿತ್ತುವವನು ಕೇಡನ್ನು ಕೊಯ್ಯುವನು; ಅವನ ಕೋಪದ ಬೆತ್ತವು ಮುರಿದು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:8
12 ತಿಳಿವುಗಳ ಹೋಲಿಕೆ  

ನಾನು ನೋಡಿರುವ ಮಟ್ಟಿಗೆ ಅಧರ್ಮವನ್ನು ಉತ್ತು ಕೇಡನ್ನು ಬಿತ್ತುವವರು ಕೇಡನ್ನೇ ಕೊಯ್ಯುವರು.


ನೀವು ಮಾಡಿದ ವ್ಯವಸಾಯವು ದುಷ್ಟತನ, ನಿಮಗಾದ ಬೆಳೆಯು ಅನ್ಯಾಯ; ನೀವು ನಿಮ್ಮ ಕಟ್ಟುಪಾಡಿನಲ್ಲಿಯೂ ನಿಮ್ಮ ಶೂರರ ಬಾಹುಳ್ಯದಲ್ಲಿಯೂ ಭರವಸವಿಟ್ಟದರಿಂದ ಮೋಸದ ಫಲವನ್ನು ಅನುಭವಿಸಿದ್ದೀರಿ.


ಹೀಗೆ ಯೆಹೋವನು ದಂಡದಿಂದ ದಂಡಿಸುವಾಗ ಅಶ್ಶೂರ್ಯರು ಆತನ ಧ್ವನಿಯಿಂದಲೇ ಭಂಗಪಡುವರು.


ಮೂರ್ಖನ ಬಾಯಲ್ಲಿ ಗರ್ವವು ಅಂಕುರಿಸುವದು; ಜ್ಞಾನಿಗಳ ತುಟಿಗಳು ಅವರನ್ನು ಕಾಯುವವು.


ದುಷ್ಟರ ದಂಡಾಧಿಕಾರವು ನೀತಿವಂತರ ಸ್ವಾಸ್ತ್ಯದಲ್ಲಿ ಉಳಿಯುವದೇ ಇಲ್ಲ; ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಚ್ಚಾರು.


ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲಿಗಾಗಿ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟುಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.


ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಹಾವಿನ ಬೀಜದಿಂದ ಮಹಾ ನಾಗವುಂಟಾಗುವದು, ಆ ಬೀಜದ ಸಂತತಿಯು ಹಾರುವ ಅಗ್ನಿಮಯಸರ್ಪವೇ.


ಆಹಾ, ಅಶ್ಶೂರವೇ, ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೋಷವೇ!


ಅವರಿಗೆ ಭಾರವಾದ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ವಿುದ್ಯಾನಿನ ನಾಶದಿನದಲ್ಲಿ ಮುರಿದುಬಿಟ್ಟಂತೆ ಮುರಿದುಬಿಟ್ಟಿದ್ದೀ.


ಆದದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವದು.


ಬಹು ಸ್ವಲ್ಪ ಕಾಲದೊಳಗೆ [ನಿಮ್ಮ ಮೇಲಿನ] ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು