Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:9 - ಕನ್ನಡ ಸತ್ಯವೇದವು J.V. (BSI)

9 ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು; ತನ್ನ ಅನ್ನವನ್ನು ಬಡವರಿಗೆ ಕೊಡುತ್ತಾನಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಉದಾರ ದೃಷ್ಟಿಯುಳ್ಳವನು ಆಶೀರ್ವದಿತನು; ಆಹಾರವನ್ನು ಬಡವರೊಂದಿಗೆ ಆತ ಹಂಚಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಉದಾರಿಯು ತನ್ನ ಆಹಾರವನ್ನು ಬಡವರೊಂದಿಗೆ ಹಂಚಿಕೊಳ್ಳುವುದರಿಂದ ಆಶೀರ್ವಾದ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಉದಾರವಾಗಿ ಕೊಡುವವನು ಆಶೀರ್ವಾದವನ್ನು ಹೊಂದುವನು, ಏಕೆಂದರೆ ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:9
29 ತಿಳಿವುಗಳ ಹೋಲಿಕೆ  

ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು; ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.


ನೀವು ದೇವಜನರಿಗೆ ಉಪಚಾರ ಮಾಡಿದಿರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನೂ ಇದರಲ್ಲಿ ನೀವು ದೇವರ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವದಕ್ಕೆ ಅನ್ಯಾಯಸ್ಥನಲ್ಲ.


ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿಸತ್ಕಾರ ಮಾಡಿರಿ.


ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವೂ ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು - ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯವೆಂಬದಾಗಿ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು ಅಂದನು.


ಇದಲ್ಲದೆ ಪರೋಪಕಾರವನ್ನೂ ಧರ್ಮಮಾಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.


ಆದರೆ ನೀನು ಔತಣ ಮಾಡಿಸುವಾಗ ಬಡವರು ಊನವಾದವರು ಕುಂಟರು ಕುರುಡರು ಇಂಥವರನ್ನು ಕರೆ;


ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು; ಘನವಾದವುಗಳಲ್ಲಿಯೇ ನಿರತನಾಗಿರುವನು.


ಬಡವನ ಮೊರೆಗೆ ಕಿವಿಮುಚ್ಚಿಕೊಳ್ಳುವವನು ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.


ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವದು.


ಉದಾರಿಯು ಪುಷ್ಟನಾಗುವನು; ನೀರು ಹಾಯಿಸುವವನಿಗೆ ನೀರು ಸಿಕ್ಕುವದು.


ಸೂಳೆಗಾರಿಕೆ ಕಳ್ಳತನ ಕೊಲೆ ಹಾದರ ದ್ರವ್ಯಾಶೆ ಕೆಡುಕುತನ ಮೋಸ ಬಂಡತನ ಹೊಟ್ಟೇಕಿಚ್ಚು ಬೈಗಳು ಸೊಕ್ಕು ಬುದ್ಧಿಗೇಡಿತನ ಇವೇ ಮೊದಲಾದವುಗಳ ಕೆಟ್ಟ ಆಲೋಚನೆಗಳು ಹೊರಡುತ್ತವೆ.


ನನ್ನ ಬದುಕನ್ನು ನಾನು ಬೇಕಾದ ಹಾಗೆ ಮಾಡಬಹುದಲ್ಲವೋ? ನಾನು ಒಳ್ಳೆಯವನಾಗಿರುವದು ನಿನ್ನ ಕಣ್ಣನ್ನು ಒತ್ತುತ್ತದೋ ಎಂದು ಹೇಳಿದನು.


ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಬಹಳವಾಗಿ ಇರಿಕಿಸುವ ಕಾಲದಲ್ಲಿ ಕೋಮಲತೆಯ ಮತ್ತು ಅತಿಸುಕುಮಾರತೆಯ ದೆಸೆಯಿಂದ ಅಂಗಾಲನ್ನೂ ನೆಲಕ್ಕೆ ಇಡದವಳಾದ ಸ್ತ್ರೀಯು ತಿನ್ನಲಿಕ್ಕೆ ಏನೂ ಇಲ್ಲದವಳಾಗಿ ತಾನು ಆಗಲೇ ಹೆತ್ತ ಮಗುವನ್ನೂ ಅದರ ಮೇಲಣ ಮಾಸನ್ನೂ ರಹಸ್ಯವಾಗಿ ತಿನ್ನಬೇಕೆಂದು ಪ್ರಾಣಪ್ರಿಯರಾದ ಗಂಡನಿಗೂ ಮಗನಿಗೂ ಮಗಳಿಗೂ ಮೋರೆಯನ್ನು ಕಪ್ಪುಮಾಡಿಕೊಳ್ಳವಳು.


ಬಡವರಿಗಾಗಿ ಕೈ ಬಿಚ್ಚಿ ದಿಕ್ಕಿಲ್ಲದವರಿಗೆ ಕೈ ನೀಡುವಳು.


ಪರೋಪಕಾರವು ತನಗೂ ಉಪಕಾರ; ಕ್ರೂರನು ತನ್ನ ಶರೀರವನ್ನೂ ಹಿಂಸಿಸುವನು.


ಧರ್ಮಕ್ಕೆ ಆತುರಪಡುವವನಿಗೆ ದಯೆ; ಕೇಡನ್ನು ಹುಡುಕುವವನಿಗೆ ಕೇಡೇ.


ನೆರೆಯವನನ್ನು ತಿರಸ್ಕರಿಸುವವನು ದೋಷಿ; ದರಿದ್ರನನ್ನು ಕನಿಕರಿಸುವವನು ಧನ್ಯನು.


ದೋಷವಲ್ಲವೆಂದು ತಾಯಿತಂದೆಗಳ ಧನವನ್ನು ಕದಿಯುವವನು ಕೇಡಿಗನಿಗೆ ಜೊತೆಗಾರನು.


ಬಡವರಿಗೆ ದಾನಮಾಡುವವನು ಕೊರತೆಪಡನು; ಕಣ್ಣು ಮುಚ್ಚಿಕೊಳ್ಳುವವನು ಬಹುಶಾಪಕ್ಕೆ ಒಳಗಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು