Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:23 - ಕನ್ನಡ ಸತ್ಯವೇದವು J.V. (BSI)

23 ಸತ್ಯವನ್ನು ಎಂದರೆ ಜ್ಞಾನ ಸುಶಿಕ್ಷೆ ವಿವೇಕಗಳನ್ನು ಕೊಂಡುಕೋ; ಮಾರಿ ಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಸತ್ಯವನ್ನು ಎಂದರೆ ಜ್ಞಾನ, ಸುಶಿಕ್ಷೆ, ವಿವೇಕಗಳನ್ನು ಕೊಂಡುಕೋ, ಮಾರಿ ಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸತ್ಯವನ್ನು, ಅಂದರೆ ಜ್ಞಾನ, ಸುಶಿಕ್ಷೆ, ವಿವೇಕ ಇವನ್ನು ಬೆಲೆಕೊಟ್ಟಾದರೂ ಕೊಂಡುಕೊ, ಮಾರಿಬಿಡಬೇಡ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸತ್ಯವನ್ನು ಕೊಂಡುಕೊ; ಅದನ್ನು ಮಾರಬೇಡ. ಜ್ಞಾನ, ಸುಶಿಕ್ಷೆ ಮತ್ತು ವಿವೇಕವನ್ನು ಕೊಂಡುಕೊ. ಇವು ಖರೀದಿಗೆ ಯೋಗ್ಯವಾದವುಗಳೂ ಮಾರಲಾಗದಷ್ಟು ಅಮೂಲ್ಯವಾದವುಗಳೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಸತ್ಯವನ್ನೂ ಜ್ಞಾನವನ್ನೂ ಶಿಕ್ಷಣವನ್ನೂ ವಿವೇಕವನ್ನೂ ಕೊಂಡುಕೋ; ಆದರೆ ಅವುಗಳನ್ನು ಮಾರಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:23
19 ತಿಳಿವುಗಳ ಹೋಲಿಕೆ  

ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುವದು; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುವದು.


ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ದ್ರವ್ಯಕ್ಕೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಬಿಟ್ಟು ಅದರಿಂದಾದ ಸಂತೋಷದಿಂದ ತನ್ನ ಬದುಕನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.


ನೀನು ಉಸಿರಿದ ಧರ್ಮಶಾಸ್ತ್ರವು ಸಾವಿರಾರು ಚಿನ್ನಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ.


ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು; ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವದು ಲೇಸು.


ಐಗುಪ್ತದೇಶದ ಸರ್ವೈಶ್ವರ್ಯಕ್ಕಿಂತಲೂ ಕ್ರಿಸ್ತನ ನಿವಿುತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು; ಯಾಕಂದರೆ ಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.


ಎಲೈ, ಬಾಯಾರಿದ ಸಕಲ ಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ! ಬಂದು ದ್ರಾಕ್ಷಾರಸವನ್ನೂ ಹಾಲನ್ನೂ ಹಣಕೊಡದೆ ಕ್ರಯವಿಲ್ಲದೆ ತೆಗೆದುಕೊಳ್ಳಿರಿ.


ಸೊಲೊಮೋನನ ಜ್ಞಾನೋಕ್ತಿಗಳು. ಮಗನು ಜ್ಞಾನಿಯಾದರೆ ತಂದೆಗೆ ಸುಖ; ಅಜ್ಞಾನಿಯಾದರೆ ತಾಯಿಗೆ ದುಃಖ.


ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ.


ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದುಕೊಳ್ಳುವದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇನೆ.


ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಟ್ಟಾನು?


ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡು ತನ್ನ ಬದುಕನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು.


ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ.


ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಮರಣಕ್ಕೆ ಹಿಂತೆಗೆಯದೆ ಯಜ್ಞದ ಕುರಿಯಾದಾತನ ರಕ್ತದ ಬಲದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಜಯಿಸಿದರು.


ನಿನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಖಂಡಿತವಾಗಿ ಹೇಳುತ್ತಾನೆ; ಇಷ್ಟು ಮಾತ್ರ ಬಲ್ಲೆನು.


ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು; ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು