Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:5 - ಕನ್ನಡ ಸತ್ಯವೇದವು J.V. (BSI)

5 ನಿನ್ನ ದೃಷ್ಟಿಯು ಧನದ ಮೇಲೆ ಎರಗುತ್ತದೋ? ಧನವು ಅಷ್ಟರೊಳಗೆ ಮಾಯವಾಗುವದು; ಆಕಾಶದ ಕಡೆಗೆ ಹಾರುವ ಹದ್ದಿನಂತೆ ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ದೃಷ್ಟಿ ಅದರ ಮೇಲೆ ಬೀಳುವಷ್ಟರಲ್ಲೆ ಅದು ಮಾಯ, ರೆಕ್ಕೆ ಕಟ್ಟಿಕೊಂಡ ಗರುಡನಂತೆ ಆಗಸದತ್ತ ಅದರ ಓಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪಕ್ಷಿಯಂತೆ ಹಾರಿಹೋಗುತ್ತದೋ ಎಂಬಂತೆ ಹಣವು ಬಹುಬೇಗನೆ ಇಲ್ಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕಣ್ಣು ಮಿಟುಕಿಸುವುದರಲ್ಲಿ ಐಶ್ವರ್ಯ ಕಣ್ಮರೆಯಾಗುತ್ತದೆ. ಅದು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:5
17 ತಿಳಿವುಗಳ ಹೋಲಿಕೆ  

ಸಂಪತ್ತು ಶಾಶ್ವತವಾಗಿರುವದಿಲ್ಲವಷ್ಟೆ; ಕಿರೀಟವು ತಲತಲಾಂತರಗಳವರೆಗೆ ನಿಂತೀತೋ?


ಲೋಕದಲ್ಲಿರುವ ಶರೀರದಾಶೆ ಕಣ್ಣಿನಾಶೆ ಬದುಕುಬಾಳಿನ ಡಂಬ ಈ ಮೊದಲಾದವುಗಳೆಲ್ಲವು ತಂದೆಯಿಂದ ಹುಟ್ಟದೆ ಲೋಕದಿಂದ ಹುಟ್ಟಿದವುಗಳಾಗಿವೆ.


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ


ಭೂಲೋಕದಲ್ಲಿ ಗಂಟುಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅಂತೂ ಅದು ನುಸಿಹಿಡಿದು ಕಿಲುಬುಹತ್ತಿ ಕೆಟ್ಟುಹೋಗುವದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.


ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ ಎಂದು ಪ್ರಸಂಗಿಯು ಹೇಳುತ್ತಾನೆ.


ಆಗ ಅವರ ತಂದೆಯಾದ ಯಾಕೋಬನು ಅವರಿಗೆ - ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ; ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ; ಬೆನ್ಯಾಮೀನನನ್ನೂ ಕರಕೊಂಡು ಹೋಗಬೇಕೆಂದಿದ್ದೀರಿ, ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂತು ಎಂದು ಹೇಳಲು ರೂಬೇನನು ಅವನಿಗೆ -


ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವದು, ದೋಚಿಕೊಳ್ಳುವದು, ಹಿಂಸಿಸುವದು, ಜಜ್ಜುವದು, ಇವುಗಳನ್ನು ಮಾಡುವದರಲ್ಲಿಯೇ ನಿನ್ನ ದೃಷ್ಟಿಯೂ ನಿನ್ನ ಮನಸ್ಸೂ ನೆಲೆಗೊಂಡಿವೆ.


ಪ್ರಸಂಗಿಯು ಹೀಗೆ ಹೇಳುತ್ತಾನೆ - ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ!


ನರರು ನಿಜವಲ್ಲದ ಮಾಯಾರೂಪದಿಂದ ಸಂಚರಿಸುವವರು; ಅವರು ಸುಮ್ಮ ಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವದೋ ತಾವೇ ತಿಳಿಯರು.


ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ರಯಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೇದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.


ಅವನು ಧನಿಕನಾಗಿ ನಿದ್ರಿಸಿದರೂ ಮತ್ತೆ ನಿದ್ರೆಯನ್ನು ಕಾಣದೆ ಹೋಗುವನು, ತನ್ನ ಕಣ್ಣನ್ನು ತೆರೆಯುತ್ತಲೇ ಇಲ್ಲವಾಗುವನು.


ಅವನನ್ನು ಕರೆಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವದನ್ನೆಲ್ಲಾ ನೆರವೇರಿಸಿ ಕಟಾಕ್ಷಿಸು ಎಂದು ಅಪ್ಪಣೆಕೊಡಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು