Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:1 - ಕನ್ನಡ ಸತ್ಯವೇದವು J.V. (BSI)

1 ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಅವರ ಸಹವಾಸವನ್ನು ಬಯಸದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಅವರ ಸಹವಾಸವನ್ನು ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ. ಅವರ ಒಡನಾಟವನ್ನು ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕೆಡುಕರ ವಿಷಯದಲ್ಲಿ ಹೊಟ್ಟೆಕಿಚ್ಚುಪಡಬೇಡ; ಅವರೊಂದಿಗಿರಲು ಅಪೇಕ್ಷಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆ ಪಡದಿರು; ಇಲ್ಲವೆ ಅವರ ಸಂಗಡ ಇರುವುದಕ್ಕೆ ಅಪೇಕ್ಷಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:1
16 ತಿಳಿವುಗಳ ಹೋಲಿಕೆ  

ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.


ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ.


ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ; ಯೆಹೋವನಲ್ಲಿ ದಿನವೆಲ್ಲಾ ಭಯಭಕ್ತಿಯುಳ್ಳವನಾಗಿರು.


ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು; ಜ್ಞಾನಹೀನರ ಒಡನಾಡಿ ಸಂಕಟಪಡುವನು.


ನನ್ನ ಕಾಲುಗಳು ಜಾರಿದವುಗಳೇ; ನನ್ನ ಹೆಜ್ಜೆಗಳು ತಪ್ಪಿದವುಗಳೇ.


ಕೆಟ್ಟ ನಡತೆಯುಳ್ಳವರನ್ನು ನೋಡಿ ಉರಿಗೊಳ್ಳಬೇಡ; ದುರಾಚಾರಿಗಳಿಗೋಸ್ಕರ ಹೊಟ್ಟೆಕಿಚ್ಚು ಪಡಬೇಡ.


ಕೆಡುಕರ ಮೇಲೆ ಉರಿಗೊಳ್ಳದಿರು; ದುಷ್ಟರನ್ನು ನೋಡಿ ಹೊಟ್ಟೆಕಿಚ್ಚು ಪಡಬೇಡ.


ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ.


ಯಾವನು ದುಷ್ಟರ ಆಲೋಚನೆಯಂತೆ ನಡೆಯದೆ ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ ಧರ್ಮನಿಂದಕರೊಡನೆ ಕೂತುಕೊಳ್ಳದೆ


ದುಷ್ಟರ ಮಾರ್ಗದಲ್ಲಿ ಸೇರದಿರು; ಕೆಟ್ಟವರ ದಾರಿಯಲ್ಲಿ ನಡೆಯಬೇಡ.


ಅದಕ್ಕೆ ದೂರವಾಗಿರು, ಅದರಲ್ಲಿ ನಡೆಯದೆ ಓರೆಯಾಗು; ಮುಂದೆ ಮುಂದೆ ನಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು