Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:17 - ಕನ್ನಡ ಸತ್ಯವೇದವು J.V. (BSI)

17 ನಿನ್ನ ಶತ್ರು ಬಿದ್ದರೆ ಹಿಗ್ಗಬೇಡ, ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿನ್ನ ಶತ್ರು ಬಿದ್ದರೆ ಹಿಗ್ಗಬೇಡ, ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿನ್ನ ಶತ್ರು ಬಿದ್ದರೆ ಹಿಗ್ಗಬೇಡ; ಎಡವಿದರೆ ಮನೋಲ್ಲಾಸ ಪಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿನ್ನ ವೈರಿ ತೊಂದರೆಯಲ್ಲಿರುವಾಗ ಸಂತೋಷಪಡಬೇಡ; ಅವನು ಬೀಳುವಾಗಲೂ ಸಂತೋಷಪಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿನ್ನ ಶತ್ರು ಬಿದ್ದರೆ ಆನಂದಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:17
12 ತಿಳಿವುಗಳ ಹೋಲಿಕೆ  

ನಿನ್ನ ತಮ್ಮನ ದುರ್ದಿನದಲ್ಲಿ, ಅವನ ಅಪಾಯ ಕಾಲದಲ್ಲಿ ನೀನು ಸುಮ್ಮನೆ ನೋಡುತ್ತಿರಬಾರದಾಗಿತ್ತು; ಯೆಹೂದ್ಯರ ನಾಶನದಿವಸದಲ್ಲಿ ಹಿಗ್ಗಬಾರದಾಗಿತ್ತು; ಅವರ ಇಕ್ಕಟ್ಟಿನ ವೇಳೆಯಲ್ಲಿ ಬಾಯಿ ಕಿಸಿಯ ಬಾರದಾಗಿತ್ತು.


ನನ್ನನ್ನು ದ್ವೇಷಿಸುವವನಿಗೆ ಕೇಡುಬಂದಾಗ ಉಬ್ಬಿಕೊಂಡು ಅವನ ನಾಶನಕ್ಕೆ ಹಿಗ್ಗಿದೆನೋ?


ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು; [ಪರರ] ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.


ನನ್ನ ವಿರೋಧಿಗಳು - ನಿನ್ನ ದೇವರು ಎಲ್ಲಿ ಎಂದು ಯಾವಾಗಲೂ ನನ್ನನ್ನು ಗೇಲಿಮಾಡುವದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.


ನಿರ್ನಿವಿುತ್ತ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವದಕ್ಕೆ ಅವಕಾಶಕೊಡಬೇಡ; ನಿಷ್ಕಾರಣವೈರಿಗಳ ಕಣ್ಣುಸನ್ನೆಗೆ ಆಸ್ಪದ ಕೊಡಬೇಡ.


ಆದರೂ ನನಗೆ ಆಪತ್ತು ಬಂದಾಗ ಅವರು ಸಂತೋಷಿಸುತ್ತಾ ಕೂಡಿಕೊಂಡರು; ಅಕಾರಣವಾಗಿ ಈ ಭ್ರಷ್ಟರು ನನಗೆ ವಿರೋಧವಾಗಿ ಕೂಡಿಕೊಂಡು ಸೂರೆಮಾಡುವದನ್ನು ಬಿಡಲೇ ಇಲ್ಲ.


ಅವರು ಆನಂದಲಹರಿಯಲ್ಲಿದ್ದಾಗ - ನಮ್ಮ ವಿನೋದಕ್ಕೋಸ್ಕರ ಸಂಸೋನನನ್ನು ಕರಕೊಂಡು ಬನ್ನಿರಿ ಅಂದರು; ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ವಿನೋದಮಾಡಬೇಕಾಯಿತು.


ಅಬ್ನೇರನ ಶವವನ್ನು ಹೆಬ್ರೋನಿನಲ್ಲಿ ಸಮಾಧಿಮಾಡಿದರು. ಅರಸನು ಅವನ ಸಮಾಧಿಯ ಹತ್ತಿರ ನಿಂತು ಗಟ್ಟಿಯಾಗಿ ಅತ್ತನು; ಜನರೆಲ್ಲರೂ ಅತ್ತರು.


ಯೆಹೋವನು ನಿನ್ನ ಹರ್ಷವನ್ನು ಕಂಡು ಬೇಸರಗೊಂಡು ತನ್ನ ಕೋಪವನ್ನು ಅವನ ಕಡೆಯಿಂದ ತಿರುಗಿಸಾನು.


ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ; ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕೂತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು