Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:19 - ಕನ್ನಡ ಸತ್ಯವೇದವು J.V. (BSI)

19 ಕೆಡುಕರ ಮೇಲೆ ಉರಿಗೊಳ್ಳದಿರು; ದುಷ್ಟರನ್ನು ನೋಡಿ ಹೊಟ್ಟೆಕಿಚ್ಚು ಪಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕೆಡುಕರ ಮೇಲೆ ಉರಿಗೊಳ್ಳದಿರು, ದುಷ್ಟರನ್ನು ನೋಡಿ ಹೊಟ್ಟೆಕಿಚ್ಚುಪಡದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕೆಡುಕರನ್ನು ಕಂಡು ಉರಿಗೊಳ್ಳಬೇಡ; ದುಷ್ಟರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕೆಡುಕರ ಬಗ್ಗೆ ಅತಿಯಾಗಿ ಬೇಸರಗೊಳ್ಳಬೇಡ, ಅವರ ಮೇಲೆ ಹೊಟ್ಟೆಕಿಚ್ಚುಪಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಕೆಟ್ಟವರನ್ನು ಕಂಡು ಉರಿಗೊಳ್ಳಬೇಡ; ಇಲ್ಲವೆ ದುಷ್ಟರನ್ನು ಕಂಡು ಅಸೂಯೆಪಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:19
14 ತಿಳಿವುಗಳ ಹೋಲಿಕೆ  

ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಅವರ ಸಹವಾಸವನ್ನು ಬಯಸದಿರು.


ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ; ಯೆಹೋವನಲ್ಲಿ ದಿನವೆಲ್ಲಾ ಭಯಭಕ್ತಿಯುಳ್ಳವನಾಗಿರು.


ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು; ಜ್ಞಾನಹೀನರ ಒಡನಾಡಿ ಸಂಕಟಪಡುವನು.


ದುಷ್ಟರೇ, ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.


ಕೆಟ್ಟ ನಡತೆಯುಳ್ಳವರನ್ನು ನೋಡಿ ಉರಿಗೊಳ್ಳಬೇಡ; ದುರಾಚಾರಿಗಳಿಗೋಸ್ಕರ ಹೊಟ್ಟೆಕಿಚ್ಚು ಪಡಬೇಡ.


ನನ್ನ ಕಾಲುಗಳು ಜಾರಿದವುಗಳೇ; ನನ್ನ ಹೆಜ್ಜೆಗಳು ತಪ್ಪಿದವುಗಳೇ.


ಯಾವನು ದುಷ್ಟರ ಆಲೋಚನೆಯಂತೆ ನಡೆಯದೆ ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ ಧರ್ಮನಿಂದಕರೊಡನೆ ಕೂತುಕೊಳ್ಳದೆ


ಕತ್ತಲೆಗೆ ಸಂಬಂಧವಾದ ಕೃತ್ಯಗಳಿಂದ ಯಾವ ಪ್ರಯೋಜನವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬೈಲಿಗೆ ತಂದು ಖಂಡಿಸಿರಿ.


ಅವನು [ಇಸ್ರಾಯೇಲ್ಯರ] ಸಮೂಹದವರಿಗೆ - ಈ ದುಷ್ಟರ ಡೇರೆಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊತ್ತಿನಲ್ಲಿ ಯಾವದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು ಎಂದು ಹೇಳಿದನು.


ಪರಲೋಕದಿಂದ ಬಂದ ಮತ್ತೊಂದು ಶಬ್ದವನ್ನು ಕೇಳಿದೆನು; ಅದು ಹೇಳಿದ್ದೇನಂದರೆ - ನನ್ನ ಪ್ರಜೆಗಳೇ, ಅವಳನ್ನು ಬಿಟ್ಟುಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿಯಾಗಬಾರದು.


ಆದದರಿಂದ ಅನ್ಯಜನರ ಮಧ್ಯದಲ್ಲಿಂದ ಹೊರಟು ಬಂದು ಪ್ರತ್ಯೇಕವಾಗಿರಿ; ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.


ಯೆಹೋವನು ನಿನ್ನ ಹರ್ಷವನ್ನು ಕಂಡು ಬೇಸರಗೊಂಡು ತನ್ನ ಕೋಪವನ್ನು ಅವನ ಕಡೆಯಿಂದ ತಿರುಗಿಸಾನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು