Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:20 - ಕನ್ನಡ ಸತ್ಯವೇದವು J.V. (BSI)

20 ಕೆಟ್ಟವನಿಗೆ ಶುಭಕಾಲವು ಬಾರದು, ದುಷ್ಟರ ದೀಪವು ಆರಿಯೇ ಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕೆಟ್ಟವನಿಗೆ ಶುಭಕಾಲವು ಬಾರದು, ದುಷ್ಟರ ದೀಪವು ಆರಿಯೇ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕೆಟ್ಟವನಿಗೆ ಶುಭಕಾಲ ಬಾರದು, ದುಷ್ಟರ ದೀಪ ಆರಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆ ಕೆಡುಕರಿಗೆ ನಿರೀಕ್ಷೆಯಿಲ್ಲ. ಅವರ ಬೆಳಕು ಕತ್ತಲೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಏಕೆಂದರೆ ಕೆಡುಕನಿಗೆ ಭವಿಷ್ಯದ ನಿರೀಕ್ಷೆ ಇರುವುದಿಲ್ಲ; ದುಷ್ಟರ ದೀಪವು ಆರಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:20
15 ತಿಳಿವುಗಳ ಹೋಲಿಕೆ  

ಶಿಷ್ಟರ ಬೆಳಕು ಬೆಳಗುವದು; ದುಷ್ಟರ ದೀಪವು ಆರುವದು.


ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನ ದೀಪವು ಮಧ್ಯರಾತ್ರಿಯ ಅಂಧಕಾರದಲ್ಲಿ ಆರಿಹೋಗುವದು.


ಆತನು ದುಷ್ಟರ ಮೇಲೆ ಪಾಶಗಳನ್ನು ಸುರಿಸಲಿ. ಬೆಂಕಿ ಗಂಧಕ ಉರಿಗಾಳಿ ಇವುಗಳನ್ನು ಅವರ ಪಾನವಾಗಮಾಡಲಿ.


ದುಷ್ಟರ ದೀಪವು ಆರಿಹೋದದ್ದು ಎಷ್ಟು ಸಾರಿ? ಎಷ್ಟು ಸಾರಿ ಉಪದ್ರವವು ಅವರಿಗೆ ಸಂಭವಿಸಿದೆ? ದೇವರು ಕೋಪಗೊಂಡು ಅವರ ಪಾಲಿಗೆ ಸಂಕಟಗಳನ್ನು ಕೊಟ್ಟದ್ದು ಎಷ್ಟು ಸಲ?


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.


ಆಗ್ಗೆ ಬುದ್ಧಿಯಿಲ್ಲದವರು ಬುದ್ಧಿವಂತೆಯರಿಗೆ - ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ.


ಆದರೆ ಆ ರಾಜ್ಯದ ಬಾಧ್ಯಸ್ಥರು ಹೊರಗೆ ಕತ್ತಲೆಗೆ ಹಾಕಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು ಎಂದು ಹೇಳಿದನು.


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ಲಭಿಸುವದಲ್ಲವೆ.


ಒಂದು ಕಾಲ ಉಂಟು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.


ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.


ಅವನು ಭ್ರಮೆಗೊಂಡು ಶೂನ್ಯವಾದದ್ದರ ಮೇಲೆ ನಂಬಿಕೆಯಿಡದಿರಲಿ, ಇಟ್ಟರೆ ಅವನಿಗಾಗುವ ಪ್ರತಿಫಲವು ಶೂನ್ಯವೇ,


ವಕ್ರಹೃದಯನು ಶುಭವನ್ನು ಪಡೆಯನು; ಕೆಟ್ಟನಾಲಿಗೆಯವನು ವಿಪತ್ತಿಗೆ ಸಿಕ್ಕಿಬೀಳುವನು.


ಗರ್ವದ ದೃಷ್ಟಿ ಕೊಬ್ಬಿದ ಹೃದಯ, ದುಷ್ಟರ ಭಾಗ್ಯ, ಇವು ಧರ್ಮವಿರುದ್ಧ.


ಅವರು ಹುಲ್ಲಿನಂತೆ ಬೇಗ ಒಣಗಿ ಹೋಗುವರು; ಸೊಪ್ಪಿನ ಪಲ್ಯದಂತೆ ಬಾಡಿಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು