Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:30 - ಕನ್ನಡ ಸತ್ಯವೇದವು J.V. (BSI)

30 ಸೋಮಾರಿಯ ಹೊಲದ ಮೇಲೆಯೂ ಬುದ್ಧಿಹೀನನ ತೋಟದ ಮೇಲೆಯೂ ಹಾದು ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಸೋಮಾರಿಯ ಹೊಲದ ಮೇಲೆಯೂ, ಬುದ್ಧಿಹೀನನ ದ್ರಾಕ್ಷಿಯ ತೋಟದ ಮೇಲೆಯೂ ಹಾದು ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸೋಮಾರಿಯ ಹೊಲದ ಮೇಲೆ ನಡೆದುಹೋದೆ; ಮತಿಗೆಟ್ಟವನ ತೋಟದ ಮೇಲೆ ಹಾದುಹೋದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಸೋಮಾರಿಯ ಹೊಲದ ಸಮೀಪದಲ್ಲೂ ಅಜ್ಞಾನಿಯ ದ್ರಾಕ್ಷಿತೋಟದ ಬಳಿಯಲ್ಲೂ ನಡೆದುಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಾನು ಸೋಮಾರಿಯ ಹೊಲದ ಪಕ್ಕದಲ್ಲಿ ಬುದ್ಧಿಹೀನನ ದ್ರಾಕ್ಷಿತೋಟದ ಕಡೆಯಲ್ಲಿ ಹಾದು ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:30
14 ತಿಳಿವುಗಳ ಹೋಲಿಕೆ  

ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು; ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ.


ನಾನು ನೋಡಿರುವ ಮಟ್ಟಿಗೆ ಅಧರ್ಮವನ್ನು ಉತ್ತು ಕೇಡನ್ನು ಬಿತ್ತುವವರು ಕೇಡನ್ನೇ ಕೊಯ್ಯುವರು.


ವಿವೇಕಿಯ ತುಟಿಗಳಿಂದ ಜ್ಞಾನ; ಬುದ್ಧಿಹೀನನ ಬೆನ್ನಿಗೆ ಬೆತ್ತ.


ವ್ಯಭಿಚಾರಿಯೋ ಕೇವಲ ಬುದ್ಧಿಶೂನ್ಯನು, ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.


ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವದನ್ನಾಗಲಿ ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವದನ್ನಾಗಲಿ ನೋಡಲಿಲ್ಲ.


ಕೇಳು, ನಾನು ಒಂದು ಸಂಗತಿಯನ್ನು ತಿಳಿಸುವೆನು, ಕಂಡದ್ದನ್ನೇ ವಿವರಿಸುವೆನು.


ಇಗೋ, ಇದನ್ನು ವಿಚಾರಿಸಿದ್ದೇವೆ, ಯಥಾರ್ಥವಾಗಿಯೇ ಇದೆ; ಇದನ್ನು ಕೇಳು, ನಿನ್ನಷ್ಟಕ್ಕೆ ನೀನೇ ತಿಳಿದುಕೋ.


ಧರ್ಮಿಯು ತನ್ನ ಧರ್ಮದಲ್ಲಿಯೇ ನಶಿಸುವದುಂಟು; ಅಧರ್ಮಿಯು ತನ್ನ ಅಧರ್ಮದಲ್ಲಿಯೇ ಬಹು ದಿನ ಬದುಕುವದುಂಟು; ಇದನ್ನೆಲ್ಲಾ ನನ್ನ ವ್ಯರ್ಥವಾದ ಜೀವಮಾನದಲ್ಲಿ ನೋಡಿದ್ದೇನೆ.


ಯಥಾರ್ಥರು ಇದನ್ನು ನೋಡಿ ಹಿಗ್ಗುವರು; ಕೆಡುಕುಬಾಯಿ ಮುಚ್ಚಿಹೋಗುವದು.


ಸೋಮಾರಿತನದಿಂದ ತೊಲೆಗಳು ಬೊಗ್ಗುವವು, ಜೋಲುಗೈಯಿಂದ ಮನೆ ಸೋರುವದು.


ಸೋಮಾರಿಯ ಆಶೆಯು ವ್ಯರ್ಥ; ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು