Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:32 - ಕನ್ನಡ ಸತ್ಯವೇದವು J.V. (BSI)

32 ಆಗ ನಾನು ನೋಡಿ ಮನಸ್ಸಿಟ್ಟೆನು; ದೃಷ್ಟಿಸಿ ಶಿಕ್ಷಿತನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆಗ ನಾನು ನೋಡಿ ಆಲೋಚಿಸಿದೆನು, ದೃಷ್ಟಿಸಿ ಶಿಕ್ಷಿತನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅದನ್ನು ನೋಡಿ ಚಿಂತಿಸತೊಡಗಿದೆ; ಆ ದೃಶ್ಯದಿಂದ ಈ ಪಾಠ ಕಲಿತೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅದನ್ನು ನೋಡಿ, ಆಲೋಚಿಸಿದೆ; ಒಂದು ಪಾಠವನ್ನು ಕಲಿತುಕೊಂಡೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆಗ ನಾನು ಅದನ್ನು ನೋಡಿ ಚಿಂತಿಸತೊಡಗಿದೆ; ನಾನು ಕಂಡದ್ದರಿಂದ ಪಾಠ ಕಲಿತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:32
12 ತಿಳಿವುಗಳ ಹೋಲಿಕೆ  

ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ; ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಬುದ್ಧಿವಾದಗಳಾಗಿ ಬರೆದವೆ.


ಅವರು ಕೆಟ್ಟ ವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ.


ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು.


ಆದರೆ ಮರಿಯಳು ಆ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿಟ್ಟುಕೊಂಡು ಯೋಚಿಸುತ್ತಿದ್ದಳು.


ಭಯಪಡಿರಿ, ಪಾಪಮಾಡಬೇಡಿರಿ, ಮೌನವಾಗಿರಿ; ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ. ಸೆಲಾ.


ಮಾನವನು ಎಷ್ಟರವನು, ಅವನನ್ನು ನೀನು ಏಕೆ ಹೆಚ್ಚಿಸಬೇಕು? ಅವನಲ್ಲಿ ಏಕೆ ಮನಸ್ಸಿಡಬೇಕು?


ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವದೆಂದು ತಿಳಿದುಕೊಳ್ಳುತ್ತಿದ್ದರು.


ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲ್ಯರೆಲ್ಲರೂ ಕೇಳಿ ಭಯಪಡುವರು.


ಇದನ್ನು ಇಸ್ರಾಯೇಲ್ಯರೆಲ್ಲರೂ ಕೇಳಿ ಭಯಪಟ್ಟು ಅಂಥ ದುಷ್ಕಾರ್ಯವನ್ನು ಅಲ್ಲಿಂದ ಮುಂದೆ ಮಾಡದೆ ಇರುವರು.


ಆಹಾ, ಮುಳ್ಳುಗಿಡಗಳು ಅದರಲ್ಲಿ ಹರಡಿಕೊಂಡಿದ್ದವು; ಕಳೆಗಳು ಅದನ್ನು ಮುಚ್ಚಿದ್ದವು, ಅದರ ಕಲ್ಲಿನ ಗೋಡೆಯು ಹಾಳಾಗಿತ್ತು.


ಇನ್ನು ಸ್ವಲ್ಪ ನಿದ್ರೆ, ಇನ್ನು ತುಸು ತೂಕಡಿಕೆ, ಇನ್ನೂ ಕೊಂಚ ನಿದ್ದೆಗಾಗಿ ಕೈಮುದುರಿಕೊಳ್ಳುವೆ ಅಂದುಕೊಳ್ಳುವಿಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು