Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:33 - ಕನ್ನಡ ಸತ್ಯವೇದವು J.V. (BSI)

33 ಇನ್ನು ಸ್ವಲ್ಪ ನಿದ್ರೆ, ಇನ್ನು ತುಸು ತೂಕಡಿಕೆ, ಇನ್ನೂ ಕೊಂಚ ನಿದ್ದೆಗಾಗಿ ಕೈಮುದುರಿಕೊಳ್ಳುವೆ ಅಂದುಕೊಳ್ಳುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಇನ್ನು ಸ್ವಲ್ಪ ನಿದ್ದೆ, ಇನ್ನು ತುಸ ತೂಕಡಿಕೆ, ಇನ್ನೂ ಕೊಂಚ ನಿದ್ದೆಗಾಗಿ ಕೈಮುದುರಿಕೊಳ್ಳುವೆ ಅಂದುಕೊಳ್ಳುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 “ಇನ್ನೂ ಸ್ವಲ್ಪ ನಿದ್ರೆ, ಇನ್ನೂ ತುಸು ತೂಕಡಿಕೆ, ಕೈ ಮುದುಡಿಕೊಂಡು ಇನ್ನೂ ಕೊಂಚ ಮಲಗಿಕೊಳ್ಳುವೆ” ಎನ್ನುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ವಿಶ್ರಾಂತಿ, ಇನ್ನು ಸ್ವಲ್ಪ ಕೈಮುದುರಿಕೊಳ್ಳುವೆ, ಮಧ್ಯಾಹ್ನ ಇನ್ನು ಸ್ವಲ್ಪ ನಿದ್ರೆ ಮಾಡುವೆ ಎನ್ನುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ಇನ್ನು ಸ್ವಲ್ಪ ವಿಶ್ರಾಂತಿಗಾಗಿ ಕೈ ಮುದುರಿಕೊಳ್ಳುವೆ ಎನ್ನುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:33
11 ತಿಳಿವುಗಳ ಹೋಲಿಕೆ  

ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ವಿಮೋಚನೆಯು ಹತ್ತಿರವಾಯಿತು.


ಆದದರಿಂದ - ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಕ್ರಿಸ್ತನು ನಿನಗೆ ಪ್ರಕಾಶ ಕೊಡುವನು ಎಂದು ಹೇಳಿಯದೆ.


ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವದು; ಸೋಮಾರಿಯು ಹಸಿವೆಗೊಳ್ಳುವನು.


ನಿದ್ರಾನಿರತನಾಗಿರಬೇಡ! ಬಡವನಾದೀಯೆ; ಕಣ್ಣು ತೆರೆ! ಆಹಾರದಿಂದ ತೃಪ್ತಿಗೊಳ್ಳುವಿ.


ಆಗ ನಾನು ನೋಡಿ ಮನಸ್ಸಿಟ್ಟೆನು; ದೃಷ್ಟಿಸಿ ಶಿಕ್ಷಿತನಾದೆನು.


ಬಡತನವು ದಾರಿಗಳ್ಳನ ಹಾಗೂ ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು.


ಮೂಢನು ಅಪ್ಪುಗೈ ಮಾಡಿಕೊಂಡು ತನ್ನ ಮಾಂಸವನ್ನು ತಾನೇ ತಿನ್ನುವನು.


ಕೆಲಸಗಳ್ಳನು ಕೆಡುಕನಿಗೆ ತಮ್ಮ.


ಕದವು ತಿರುಗುಣಿಯಲ್ಲಿ ಹೇಗೋ ಹಾಗೆ ಸೋಮಾರಿಯು ಹಾಸಿಗೆಯಲ್ಲಿ ಸುತ್ತಾಡುತ್ತಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು