Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:12 - ಕನ್ನಡ ಸತ್ಯವೇದವು J.V. (BSI)

12 ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ ಅಪರಂಜಿಯ ಆಭರಣಕ್ಕೂ ಸಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ, ಅಪರಂಜಿಯ ಆಭರಣಕ್ಕೂ ಸಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕೇಳುವ ಕಿವಿಗೆ ಕೊಡುವ ಬುದ್ಧಿವಾದವು ಹೊನ್ನಿನ ಮುರುವು, ಅಪರಂಜಿಯ ಆಭರಣವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಜ್ಞಾನಿಯು ನಿನಗೆ ಕೊಡುವ ಎಚ್ಚರಿಕೆಯು ಚಿನ್ನದ ಉಂಗುರಗಳಿಗಿಂತಲೂ ಬಂಗಾರದ ಆಭರಣಗಳಿಗಿಂತಲೂ ಹೆಚ್ಚು ಬೆಲೆ ಬಾಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕೇಳುವ ಕಿವಿಗೆ ಜ್ಞಾನಿಯ ತಿದ್ದುವಿಕೆಯು ಬಂಗಾರದ ಮುರು; ಚೊಕ್ಕ ಬಂಗಾರದ ಆಭರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:12
16 ತಿಳಿವುಗಳ ಹೋಲಿಕೆ  

ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗುಪಕಾರ; ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ; ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರೋಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.


ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು; ಗದರಿಕೆಯನ್ನು ಗಮನಿಸುವವನು ಜಾಣನು.


ಕೇಳುವ ಕಿವಿ, ನೋಡುವ ಕಣ್ಣು, ಇವೆರಡನ್ನೂ ಯೆಹೋವನು ನಿರ್ಮಿಸಿದ್ದಾನೆ.


ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು; ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು.


ಆಗ ಅವನ ಎಲ್ಲಾ ಅಣ್ಣತಮ್ಮಂದಿರೂ ಎಲ್ಲಾ ಅಕ್ಕತಂಗಿಯರೂ ಮೊದಲು ಅವನ ಮನೆಯಲ್ಲಿ ಅವನೊಂದಿಗೆ ಭೋಜನಮಾಡುತ್ತಿದ್ದ ಎಲ್ಲಾ ಪರಿಚಿತರೂ ಅವನ ಬಳಿಗೆ ಬಂದು ಯೆಹೋವನು ಅವನ ಮೇಲೆ ಬರಮಾಡಿದ್ದ ಆಪತ್ತಿನ ವಿಷಯವಾಗಿ ತಮ್ಮ ತಮ್ಮ ಅನುತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸಿದರು. ಇದಲ್ಲದೆ ಪ್ರತಿಯೊಬ್ಬರೂ ಒಂದೊಂದು ವರಹವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.


ಒಳ್ಳೆಯವನು ತನ್ನ ಒಳ್ಳೆಯ ಬೊಕ್ಕಸದೊಳಗಿಂದ ಒಳ್ಳೆಯ ವಸ್ತುಗಳನ್ನು ತೆಗೆಯುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದೊಳಗಿಂದ ಕೆಟ್ಟ ವಸ್ತುಗಳನ್ನು ತೆಗೆಯುತ್ತಾನೆ.


ಅದಕ್ಕೆ ಆರೋನನು - ನಿಮ್ಮ ಹೆಂಡರೂ ಗಂಡುಮಕ್ಕಳೂ ಹೆಣ್ಣುಮಕ್ಕಳೂ ಕಿವಿಗೆ ಹಾಕಿಕೊಂಡಿರುವ ಚಿನ್ನದ ಮುರುವುಗಳನ್ನು ನೀವು ಕಿತ್ತು ನನಗೆ ಒಪ್ಪಿಸಿರಿ ಎಂದು ಹೇಳಲಾಗಿ


ಸಿದ್ಧಚಿತ್ತರಾದ ಗಂಡಸರೂ ಹೆಂಗಸರೂ ಬಂದು ಯೆಹೋವನಿಗೆ ಚಿನ್ನದ ಕಾಣಿಕೆಗಳನ್ನು ಅಂದರೆ ಕಡಗ, ಮೂಗುತಿ, ಮುದ್ರೆಯುಂಗುರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.


ಇಸ್ರಾಯೇಲ್ ಸ್ತ್ರೀಯರೇ, ಸೌಲನಿಗಾಗಿ ಗೋಳಾಡಿರಿ; ನಿಮಗೆ ಉಲ್ಲಾಸಕರವಾದ ರಕ್ತಾಂಬರಗಳನ್ನು ಉಡಿಸಿ ಅವುಗಳ ಮೇಲೆ ಸುವರ್ಣಾಭರಣಗಳನ್ನು ತೊಡಿಸಿದವನು ಆತನೇ ಅಲ್ಲವೋ?


ಹೊನ್ನಾಗಲಿ ಗಾಜಾಗಲಿ ಅದಕ್ಕೆ ಸಮವಾದೀತೇ? ಚಿನ್ನದ ಆಭರಣಗಳನ್ನು ಅದಕ್ಕೆ ಬದಲು ಕೊಡುವದು ಸಾಧ್ಯವೋ?


ಅಜ್ಞಾನಿಗಳ ಗಾನಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವದು ಲೇಸು.


ಮೂಗಿಗೆ ಮೂಗುತಿಯನ್ನು, ಶಿರಸ್ಸಿಗೆ ಸುಂದರಕಿರೀಟವನ್ನು ಇಟ್ಟು ನಿನ್ನನ್ನು ಆಭರಣಗಳಿಂದ ಸಿಂಗರಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು