Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:18 - ಕನ್ನಡ ಸತ್ಯವೇದವು J.V. (BSI)

18 ನೆರೆಯವನ ಮೇಲೆ ಸುಳ್ಳುಸಾಕ್ಷಿ ಹೇಳುವವನು ಚಮಟಿಕೆ, ಕತ್ತಿ, ಚೂಪಾದ ಬಾಣ ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೆರೆಯವನ ಮೇಲೆ ಸುಳ್ಳುಸಾಕ್ಷಿಹೇಳುವವನು, ಚಮಟಿಕೆ, ಕತ್ತಿ, ಚೂಪಾದ ಬಾಣ ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳುವವನು ಕೊಡತಿಗೆ, ಕತ್ತಿಗೆ, ಹರಿತವಾದ ಬಾಣಕ್ಕೆ ಸಮಾನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳುವವನು ಅಪಾಯಕಾರಿ. ಅವನು ದೊಣ್ಣೆಯಂತೆಯೂ ಕತ್ತಿಯಂತೆಯೂ ಚೂಪಾದ ಬಾಣದಂತೆಯೂ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಖಡ್ಗ, ಹರಿತವಾದ ಬಾಣವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:18
12 ತಿಳಿವುಗಳ ಹೋಲಿಕೆ  

ಸಿಂಹಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ಬೆಂಕಿಕಾರುವ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಶಸ್ತ್ರಬಾಣಗಳು; ನಾಲಿಗೆಗಳು ಹದವಾದ ಕತ್ತಿಗಳೇ.


ಕತ್ತಿ ತಿವಿದ ಹಾಗೆ ದುಡುಕಿ ಮಾತಾಡುವವರುಂಟು; ಮತಿವಂತರ ಮಾತೇ ಮದ್ದು.


ಎಷ್ಟು ಕೊಂಚ ಕಿಚ್ಚು ಎಷ್ಟು ದೊಡ್ಡ ಕಾಡನ್ನು ಉರಿಸುತ್ತದೆ ನೋಡಿರಿ. ನಾಲಿಗೆಯೂ ಕಿಚ್ಚೇ. ನಾಲಿಗೆಯು ಅಧರ್ಮಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಟ್ಟದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕದಿಂದ ಬೆಂಕಿಹತ್ತಿಸಿಕೊಳ್ಳುತ್ತಾ ಪ್ರಪಂಚವೆಂಬ ಚಕ್ರಕ್ಕೆ ಬೆಂಕಿಹಚ್ಚುತ್ತದೆ.


ಅವರ ನಾಲಿಗೆಯು ಕೊಲ್ಲುವ ಬಾಣವಾಗಿದೆ, ಅದು ಸುಳ್ಳನ್ನೇ ಆಡುತ್ತದೆ; ಒಬ್ಬನು ತನ್ನ ನೆರೆಯವನಿಗೆ ಬಾಯಿಂದ ಶುಭವಾಗಲಿ ಎಂದು ಹೇಳಿದರೂ ತನ್ನ ಹೃದಯದಲ್ಲಿ ಅವನಿಗಾಗಿ ಹೊಂಚುಹಾಕುತ್ತಾನೆ.


ಸುಳ್ಳಾಡುವದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬೊಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ; ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ಅನ್ನುತ್ತಾನೆ.


ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ಮಾತಿನಿಂದ ಮೋಸಮಾಡುವಿಯಾ?


ತಮ್ಮ ನಾಲಿಗೆಯನ್ನು ಸರ್ಪದಂತೆ ಹದಮಾಡಿದ್ದಾರೆ; ಅವರ ತುಟಿಗಳ ಹಿಂದೆ ಹಾವಿನ ವಿಷವದೆ. ಸೆಲಾ.


ಮೋಸಗಾರನೇ, ನಿನ್ನ ನಾಲಿಗೆಯು ಹದವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ.


ಅವನ ಬಾಯಿ ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯವೇ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚುಕತ್ತಿಗಳೇ ಸರಿ.


ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.


ನೆರೆಯವನು ಬೇಸರಗೊಂಡು ಹಗೆ ಮಾಡದ ಹಾಗೆ ಅವನ ಮನೆಯಲ್ಲಿ ಅಪರೂಪವಾಗಿ ಹೆಜ್ಜೆಯಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು