Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:5 - ಕನ್ನಡ ಸತ್ಯವೇದವು J.V. (BSI)

5 ರಾಜನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ಧರ್ಮದಿಂದ ಸ್ಥಿರವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ರಾಜನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ, ಅವನ ಸಿಂಹಾಸನವು ಧರ್ಮದಿಂದ ಸ್ಥಿರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಂತೆಯೆ ರಾಜನ ಸನ್ನಿಧಾನದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ರಾಜ್ಯಭಾರ ನೀತಿಯಾಧಾರದಿಂದ ಸುಸ್ಥಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಂತೆಯೇ, ರಾಜನಿಂದ ಕೆಟ್ಟ ಆಲೋಚನೆಗಾರರನ್ನು ತೆಗೆದುಹಾಕಿದರೆ, ಒಳ್ಳೆಯತನವು ಅವನ ಆಡಳಿತವನ್ನು ಭದ್ರಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅರಸನ ಸನ್ನಿಧಾನದಿಂದ ದುಷ್ಟರನ್ನು ತೆಗೆದುಹಾಕಿದರೆ, ಆಗ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:5
13 ತಿಳಿವುಗಳ ಹೋಲಿಕೆ  

ರಾಜನು ನ್ಯಾಯಾಸನಾರೂಢನಾಗಿ ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.


ರಾಜರು ಸಿಂಹಾಸನಕ್ಕೆ ಧರ್ಮವೇ ಆಧಾರವೆಂದು ತಿಳಿದು ಅಧರ್ಮವನ್ನಾಚರಿಸಲು ಅಸಹ್ಯಪಡುವರು.


ರಾಜನ ಕೃಪಾಸತ್ಯತೆಗಳು ಅವನನ್ನು ಕಾಯುವವು; ಅವನ ಕರುಣೆಯೇ ಅವನ ಸಿಂಹಾಸನಕ್ಕೆ ಆಧಾರ.


ಇದಲ್ಲದೆ ಸಿಂಹಾಸನವು ಕೃಪಾಧಾರದ ಮೇಲೆ ಸ್ಥಾಪಿತವಾಗಿದೆ; ರಾಜ್ಯಭಾರಪ್ರವೀಣನೂ ಧರ್ಮಾಸಕ್ತನೂ ನ್ಯಾಯನಿಪುಣನೂ ಆದವನು ದಾವೀದನ ಗುಡಾರದಲ್ಲಿನ ಆ ಸಿಂಹಾಸನದ ಮೇಲೆ ಸತ್ಯಪರನಾಗಿ ಕುಳಿತಿದ್ದಾನೆ.


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ಬಡವರನ್ನು ನ್ಯಾಯವಾಗಿ ಆಳುವ ರಾಜನ ಸಿಂಹಾಸನವು ಶಾಶ್ವತವು.


ಹಾಮಾನನನ್ನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿಗೆ ಹಾಕಿದರು. ಅರಸನ ಕೋಪವೂ ಶಾಂತವಾಯಿತು.


ಯೆಹೋಯಾದಾವನ ಮಗನಾದ ಬೆನಾಯನಿಗೆ ಅವನನ್ನು ಸಂಹರಿಸೆಂದು ಆಜ್ಞಾಪಿಸಲು ಇವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸ್ಥಿರವಾಯಿತು.


ಈ ಇಬ್ಬರನ್ನೂ ವಧಿಸಿದ ಪಾಪವು ಯೋವಾಬನ ತಲೆಯ ಮೇಲೆಯೂ ಅವನ ಸಂತಾನದವರ ತಲೆಯ ಮೇಲೆಯೂ ಇರಲಿ. ಆದರೆ ದಾವೀದನಿಗೂ ಅವನ ಸಿಂಹಾಸನ ಕುಟುಂಬ ಸಂತಾನಗಳಿಗೂ ಯೆಹೋವನಿಂದ ನಿತ್ಯ ಸೌಭಾಗ್ಯವು ದೊರಕಲಿ ಅಂದನು.


ಆದರೆ ಸೊಲೊಮೋನ ರಾಜನಿಗೆ ಆಶೀರ್ವಾದವಾಗಲಿ; ದಾವೀದನ ಸಿಂಹಾಸನವು ಯೆಹೋವನ ಸನ್ನಿಧಿಯಲ್ಲಿ ಸದಾಕಾಲವೂ ಇರಲಿ ಎಂದು ಹೇಳಿ


ರಾಜನ ಸನ್ನಿಧಾನದಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ಶ್ರೀಮಂತರಿಗೆ ಏರ್ಪಡಿಸಿರುವ ಸ್ಥಾನದಲ್ಲಿ ನಿಂತುಕೊಳ್ಳದಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು