Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:6 - ಕನ್ನಡ ಸತ್ಯವೇದವು J.V. (BSI)

6 ರಾಜನ ಸನ್ನಿಧಾನದಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ಶ್ರೀಮಂತರಿಗೆ ಏರ್ಪಡಿಸಿರುವ ಸ್ಥಾನದಲ್ಲಿ ನಿಂತುಕೊಳ್ಳದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ರಾಜನ ಸನ್ನಿಧಾನದಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ, ಶ್ರೀಮಂತರಿಗೆ ಏರ್ಪಡಿಸಿರುವ ಸ್ಥಾನದಲ್ಲಿ ನಿಂತುಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ರಾಜನ ಸನ್ನಿಧಾನದಲ್ಲಿ ನಿನ್ನನ್ನೇ ಹೆಚ್ಚಿಸಿಕೊಳ್ಳಬೇಡ; ದೊಡ್ಡವರಿಗೆ ಏರ್ಪಡಿಸಿದ ಸ್ಥಾನದಲ್ಲಿ ನಿಂತುಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ರಾಜನ ಮುಂದೆ ಜಂಬಕೊಚ್ಚಿಕೊಳ್ಳಬೇಡ. ಪ್ರಮುಖರ ಸ್ಥಳದಲ್ಲಿ ನಿಂತುಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅರಸನ ಸನ್ನಿಧಿಯಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ದೊಡ್ಡವರಿಗೆ ಏರ್ಪಡಿಸಿದ ಸ್ಥಾನವನ್ನು ಕೇಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:6
15 ತಿಳಿವುಗಳ ಹೋಲಿಕೆ  

ನಿನ್ನನು ನೀನೇ ಹೊಗಳಿಕೊಳ್ಳಬೇಡ, ಮತ್ತೊಬ್ಬನು ಹೊಗಳಿದರೆ ಹೊಗಳಲಿ; ಆತ್ಮಸ್ತುತಿ ಬೇಡ, ಪರನು ನಿನ್ನನ್ನು ಸ್ತುತಿಸಿದರೆ ಸ್ತುತಿಸಲಿ.


ಜೇನನ್ನು ಹೆಚ್ಚಾಗಿ ತಿನ್ನುವದು ಹಿತವಲ್ಲ; ಸ್ವಂತಮಾನವನ್ನು ಹೆಚ್ಚಾಗಿ ಯೋಚಿಸುವದು ಮಾನವಲ್ಲ.


ಸೊಕ್ಕಿನವರ ಸಂಗಡ ಸೂರೆಯನ್ನು ಹಂಚಿಕೊಳ್ಳುವದಕ್ಕಿಂತಲೂ ದೀನರ ಸಂಗಡ ದೈನ್ಯದಿಂದಿರುವದು ವಾಸಿ.


ಮೋಶೆ ದೇವರಿಗೆ - ಫರೋಹನ ಸನ್ನಿಧಾನಕ್ಕೆ ಹೋಗುವದಕ್ಕೂ ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ ಕರೆದುಕೊಂಡುಬರುವದಕ್ಕೂ ನಾನು ಎಷ್ಟರವನು ಎಂದು ಹೇಳಿದನು.


ಯೆಹೋವನೇ, ನನ್ನ ಎದೆಯಲ್ಲಿ ಹವ್ಮಿುಲ್ಲ; ನನಗೆ ಸೊಕ್ಕಿನ ಕಣ್ಣಿಲ್ಲ; ಅಸಾಧ್ಯಕಾರ್ಯಗಳಲ್ಲಿ ಕೈಹಾಕುವದಿಲ್ಲ.


ಸಮುವೇಲನು - ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಯೆಹೋವನು ನಿನಗೆ ಇಸ್ರಾಯೇಲ್ಯರಲ್ಲಿ ರಾಜ್ಯಾಭಿಷೇಕಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸಾದಿ.


ಯಾವನಾದರೂ ನಿನ್ನನ್ನು ಮದುವೇ ಊಟಕ್ಕೆ ಕರೆದರೆ ಪಂಙ್ತಿಯೊಳಗೆ ಮೊದಲನೆಯ ಸ್ಥಾನದಲ್ಲಿ ಕೂತುಕೊಳ್ಳಬೇಡ; ಒಂದು ವೇಳೆ ನಿನಗಿಂತ ಮಾನವುಳ್ಳವನನ್ನು ಅವನು ಕರೆದಿರಬಹುದು,


ಆದರೆ ಯಾವನಾದರೂ ನಿನ್ನನ್ನು ಕರೆದಾಗ ನೀನು ಹೋಗಿ ಕಡೆಯ ಸ್ಥಾನದಲ್ಲಿ ಕೂತುಕೋ; ಹೀಗೆ ಮಾಡಿದರೆ ನಿನ್ನನ್ನು ಕರೆದವನು ಬಂದು ನಿನ್ನನ್ನು ನೋಡಿ - ಸ್ನೇಹಿತನೇ, ಇನ್ನೂ ಮೇಲಕ್ಕೆ ಬಾ ಅನ್ನುವನು. ಆಗ ನಿನ್ನ ಸಂಗಡ ಕೂತಿರುವವರೆಲ್ಲರ ಮುಂದೆ ನಿನಗೆ ಮಾನ ಬರುವದು.


ರಾಜನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ಧರ್ಮದಿಂದ ಸ್ಥಿರವಾಗುವದು.


ನೀನು ಪ್ರಭುವನ್ನು ದರ್ಶನಮಾಡುತ್ತಿರಲು ಅವನ ಸಮಕ್ಷಮ ಕೆಳಗಣಸ್ಥಾನಕ್ಕೆ ನೂಕಿಸಿಕೊಳ್ಳುವದಕ್ಕಿಂತಲೂ ಇನ್ನೂ ಮೇಲಕ್ಕೆ ಬಾ ಎಂದು ಕರೆಯಿಸಿಕೊಳ್ಳುವದು ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು