Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:8 - ಕನ್ನಡ ಸತ್ಯವೇದವು J.V. (BSI)

8 ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ; ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ, ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಓಡಬೇಡ; ಕಡೆಗೆ ಅವನು ನಿನ್ನ ಮಾನಕಳೆದಾಗ ಏನು ಮಾಡುವೆ, ಯೋಚಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀನು ಕಂಡ ಯಾವುದನ್ನಾದರೂ ನ್ಯಾಯಾಧೀಶನಿಗೆ ತಿಳಿಸಲು ಆತುರಪಡಬೇಡ. ನೀನು ತಪ್ಪಿತಸ್ಥನೆಂದು ಬೇರೊಬ್ಬನು ಹೇಳಿದರೆ, ನಿನಗೆ ಅವಮಾನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದುಡುಕಿ ವ್ಯಾಜ್ಯಮಾಡುವುದಕ್ಕಾಗಿ ಹೋಗಬೇಡ. ಏಕೆಂದರೆ ನಿನ್ನ ನೆರೆಯವನು ನಿನ್ನನ್ನು ಅವಮಾನ ಮಾಡಿದಾಗ, ನೀನು ಕಡೆಯಲ್ಲಿ ಏನು ಮಾಡುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:8
12 ತಿಳಿವುಗಳ ಹೋಲಿಕೆ  

ನಿನ್ನ ವಾದಿಯ ಸಂಗಡ ಇನ್ನೂ ದಾರಿಯಲ್ಲಿರುವಾಗಲೇ ಅವನ ಕೂಡ ಬೇಗ ಸಮಾಧಾನ ಮಾಡಿಕೋ; ಇಲ್ಲದಿದ್ದರೆ ಆ ವಾದಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು; ನ್ಯಾಯಾಧಿಪತಿಯು ನಿನ್ನನ್ನು ಓಲೇಕಾರನ ಕೈಗೆ ಒಪ್ಪಿಸಿಕೊಟ್ಟಾನು; ಆಗ ನೀನು ಸೆರೆಯಲ್ಲಿ ಬಿದ್ದೀಯೆ.


ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ; ಸಿಟ್ಟೇರುವದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.


ಹಾಲು ಕಡೆಯುವದರಿಂದ ಬೆಣ್ಣೆ, ಮೂಗು ಹಿಂಡುವದರಿಂದ ರಕ್ತ, ಕೋಪಕಲಕುವದರಿಂದ ಜಗಳ.


ಜ್ಞಾನಹೀನನ ತುಟಿಗಳು ಜಗಳವನ್ನು ಹೂಡುತ್ತವೆ; ಅವನ ಬಾಯಿ ಪೆಟ್ಟುತಿನ್ನುವದಕ್ಕೆ ಕೂಗಿಕೊಳ್ಳುತ್ತದೆ.


ಮನುಷ್ಯದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ, ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಆಗ ಅಬ್ನೇರನು ಯೋವಾಬನನ್ನು - ಕತ್ತಿಯು ಯಾವಾಗಲೂ ತಿನ್ನುತ್ತಲೇ ಇರಬೇಕೋ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೋ? ಸಹೋದರರನ್ನು ಹಿಂದಟ್ಟುವದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವಿ ಎಂದನು.


ಅವರು ತರಲು ಅರಸನು ಅವರಿಗೆ - ಜೀವದಿಂದಿರುವ ಕೂಸನ್ನು ಕಡಿದು ಎರಡು ಭಾಗಮಾಡಿ ಅರ್ಧವನ್ನು ಇವಳಿಗೂ ಅರ್ಧವನ್ನು ಅವಳಿಗೂ ಕೊಡಿರಿ ಎಂದು ಅಪ್ಪಣೆಮಾಡಿದನು.


ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ; ಕೋಪಕ್ಕೆ ಮೂಢರ ಎದೆಯೇ ನೆಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು