Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:4 - ಕನ್ನಡ ಸತ್ಯವೇದವು J.V. (BSI)

4 ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡಬೇಡ, ನೀನೂ ಅವನಿಗೆ ಸಮಾನನಾದೀಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡಬೇಡ, ನೀನೂ ಅವನಿಗೆ ಸಮಾನನಾದೀಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮೂಢನ ಪ್ರಶ್ನೆಗೆ ಉತ್ತರಕೊಡಬೇಡ; ಮೂರ್ಖನಂತೆ ಕೊಟ್ಟರೆ ನೀನೂ ಆದಿಯೇ ಅವನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮೂಢನಿಗೆ ಅವನ ಮೂರ್ಖತನದ ಮಟ್ಟದಲ್ಲಿ ಉತ್ತರ ಕೊಡಬೇಡ; ಇಲ್ಲವಾದರೆ ನೀನೂ ಅವನಂತಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮೂಢನ ಮೂರ್ಖತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನೂ ಅವನಿಗೆ ಸಮಾನನಾದೀಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:4
14 ತಿಳಿವುಗಳ ಹೋಲಿಕೆ  

ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡು; ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.


ಅಪಕಾರಕ್ಕೆ ಅಪಕಾರವನ್ನು ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.


ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ - ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ಮುಳ್ಳುಕೊರಡೆಗಳಿಂದ ದಂಡಿಸುವೆನು ಎಂದು ನುಡಿದನು.


ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ; ಸಿಟ್ಟೇರುವದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.


ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದು ನೋಡಿ ಇಸ್ರಾಯೇಲ್ಯರೆಲ್ಲರೂ ಅವನಿಗೆ - ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ; ದಾವೀದನವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.


ಆದರೆ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದಮಾಡಿದಾಗ ಅವನು ಸೈತಾನನ ಮೇಲೆ ದೂಷಣಾಭಿಪ್ರಾಯವನ್ನು ಹೇಳುವದಕ್ಕೆ ಧೈರ್ಯಗೊಳ್ಳದೆ - ಕರ್ತನು ನಿನ್ನನ್ನು ಖಂಡಿಸಲಿ ಅಂದನು.


ಆ ಸೇನಾಧಿಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು; ಏನೂ ಅನ್ನಲಿಲ್ಲ.


ದೇವರ ವಸ್ತುವನ್ನು ನಾಯಿಗಳಿಗೆ ಹಾಕಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಚೆಲ್ಲಿದರೆ ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.


ಮೂಢನ ಸಂಗಡ ಮಾತಾಡಬೇಡ; ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು.


ಮೂರ್ಖನ ಸಂಗಡ ಜ್ಞಾನಿಯು ವ್ಯಾಜ್ಯವಾಡುವಾಗ ರೇಗಿದರೂ ನಕ್ಕರೂ ಜಗಳವು ತೀರುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು