ಜ್ಞಾನೋಕ್ತಿಗಳು 27:10 - ಕನ್ನಡ ಸತ್ಯವೇದವು J.V. (BSI)10 ನಿನಗೂ ನಿನ್ನ ತಂದೆಗೂ ವಿುತ್ರನಾದವನನ್ನು ಬಿಡಬೇಡ; ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು; ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಿನಗೂ, ನಿನ್ನ ತಂದೆಗೂ ಮಿತ್ರನಾದವನನ್ನು ಬಿಡಬೇಡ, ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು, ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಿನಗೂ ನಿನ್ನ ಹೆತ್ತವನಿಗೂ ಮಿತ್ರನಾದವನನ್ನು ಬಿಡಬೇಡ; ಇಕ್ಕಟ್ಟಿನ ದಿನದಲ್ಲಿ ಒಡಹುಟ್ಟಿದವರನ್ನು ಆಶ್ರಯಿಸಬೇಡ; ದೂರವಿರುವ ಅಣ್ಣನಿಗಿಂತ ಹತ್ತಿರವಿರುವ ನೆರೆಯವನೆ ಲೇಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಿನ್ನ ಸ್ನೇಹಿತರನ್ನೂ ನಿನ್ನ ತಂದೆಯ ಸ್ನೇಹಿತರನ್ನೂ ಮರೆಯಬೇಡ. ಕಷ್ಟಬಂದಾಗ ಸಹಾಯ ಕೇಳಲು ಬಹುದೂರವಿರುವ ನಿನ್ನ ಸಹೋದರನ ಮನೆಗೆ ಹೋಗುವುದಕ್ಕಿಂತ ನಿನ್ನ ಸಮೀಪದಲ್ಲಿರುವ ನೆರೆಯವನನ್ನು ಕೇಳುವುದೇ ಉತ್ತಮ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ಏಕೆಂದರೆ ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು. ಅಧ್ಯಾಯವನ್ನು ನೋಡಿ |