Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:12 - ಕನ್ನಡ ಸತ್ಯವೇದವು J.V. (BSI)

12 ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು; ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜಾಣ ಕೇಡನ್ನು ಕಂಡು ಅಡಗಿಕೊಳ್ಳುತ್ತಾನೆ; ಕೋಣ ಮುನ್ನುಗ್ಗಿ ಹಾನಿಗೆ ಈಡಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಜ್ಞಾನಿಯು ಕೇಡನ್ನು ಕಂಡು ಆ ದಾರಿಯನ್ನೇ ಬಿಟ್ಟುಹೋಗುವನು. ಮೂಢನಾದರೋ ಕೇಡಿಗೆ ನೇರವಾಗಿ ನಡೆದು ಕಷ್ಟಕ್ಕೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಜಾಣನು ಕೇಡನ್ನು ಮುಂದಾಗಿ ಕಂಡು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಹಾನಿಗೆ ಈಡಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:12
12 ತಿಳಿವುಗಳ ಹೋಲಿಕೆ  

ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು; ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.


ಯೆಹೋವನ ನಾಮವು ಬಲವಾದ ಬುರುಜು; ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.


ನಂಬಿಕೆಯಿಂದಲೇ ನೋಹನು ಅದುವರೆಗೆ ಕಾಣದಿದ್ದ ಸಂಗತಿಗಳ ವಿಷಯವಾಗಿ ದೈವೋಕ್ತಿಯನ್ನು ಹೊಂದಿ ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ಅದರಿಂದ ಅವನು ಲೋಕದವರನ್ನು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡು ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.


ಆದರೆ ಈಗಿರುವ ಭೂಮ್ಯಾಕಾಶಗಳು ಅದೇ ವಾಕ್ಯದ ಬಲದಿಂದ ಬೆಂಕಿಯ ಮೂಲಕ ನಾಶವಾಗುವದಕ್ಕೆ ಇಡಲ್ಪಟ್ಟಿವೆ; ಮತ್ತು ಭಕ್ತಿಹೀನರ ಶಿಕ್ಷಾವಿಧಿಯೂ ನಾಶವೂ ಉಂಟಾಗುವ ದಿನಕ್ಕಾಗಿ ಆ ಬೆಂಕಿ ಸಿದ್ಧವಾಗಿದೆ.


ಆದರೆ ಅವನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಸ್ನಾನಮಾಡಿಸಿಕೊಳ್ಳುವದಕ್ಕೆ ಬರುವದನ್ನು ಕಂಡು ಅವರಿಗೆ - ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೈವಕೋಪದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮಗೆ ಉಪದೇಶ ಮಾಡಿದವರಾರು?


ಆಶ್ರಯವನ್ನು ಹೊಂದಬೇಕೆಂದು ಓಡಿಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಎರಡು ನಿಶ್ಚಲವಾದ ಆಧಾರಗಳು ಇರುವ ಕಾರಣ ಬಲವಾದ ಧೈರ್ಯವುಂಟಾಯಿತು.


ಮಗನೇ, ಜ್ಞಾನವನ್ನು ಪಡೆದುಕೊಂಡು ನನ್ನ ಮನಸ್ಸನ್ನು ಸಂತೋಷಪಡಿಸು; ಹಾಗಾದರೆ, ನನ್ನನ್ನು ದೂರುವವನಿಗೆ ನಾನು ಉತ್ತರ ಕೊಡಲಾಗುವದು.


ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ! ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆ ಮಾಡಿಕೋ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು