Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:17 - ಕನ್ನಡ ಸತ್ಯವೇದವು J.V. (BSI)

17 ಕಬ್ಬಿಣವು ಕಬ್ಬಿಣವನ್ನು ಹೇಗೋ ವಿುತ್ರನು ವಿುತ್ರನ ಬುದ್ಧಿಯನ್ನು ಹಾಗೆ ಹರಿತ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕಬ್ಬಿಣವು ಕಬ್ಬಿಣವನ್ನು ಹೇಗೆ ಹರಿತಮಾಡುವುದೋ, ಮಿತ್ರನು ಮಿತ್ರನ ಬುದ್ಧಿಯನ್ನು ಹಾಗೆಯೇ ಹರಿತಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕಬ್ಬಿಣ ಕಬ್ಬಿಣವನ್ನು ಹರಿತ ಮಾಡುವಂತೆ ಮಿತ್ರನು ಮಿತ್ರನ ಬುದ್ಧಿಯನ್ನು ಹರಿತಮಾಡಬಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಕಬ್ಬಿಣವು ಕಬ್ಬಿಣವನ್ನು ಹರಿತಗೊಳಿಸುವುದು; ಅಂತೆಯೇ ಸ್ನೇಹಿತನು ಸ್ನೇಹಿತನನ್ನು ಉತ್ತಮಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಕಬ್ಬಿಣವು ಕಬ್ಬಿಣವನ್ನು ಹರಿತ ಮಾಡುವಂತೆ ಒಬ್ಬನು ಮತ್ತೊಬ್ಬನನ್ನು ಹರಿತ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:17
21 ತಿಳಿವುಗಳ ಹೋಲಿಕೆ  

ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಪ್ರೇರೇಪಿಸೋಣ.


ತೈಲವೂ ಸುಗಂಧದ್ರವ್ಯಗಳೂ ಹೇಗೋ ವಿುತ್ರನ ಸಂಭಾಷಣೆಯಿಂದ ಅನುಭವಕ್ಕೆ ಬರುವ ಸ್ನೇಹರಸವು ಹಾಗೆ ಮನೋಹರ.


ಆಗ ಸೌಲನ ಮಗನಾದ ಯೋನಾತಾನನು ಅಲ್ಲಿಗೆ ಹೋಗಿ ದಾವೀದನಿಗೆ -


ಕ್ರಿಸ್ತ ಯೇಸುವಿನ ಒಳ್ಳೇ ಸೈನಿಕನಂತೆ ನನ್ನೊಂದಿಗೆ ಶ್ರಮೆಯನ್ನನುಭವಿಸು.


ನನ್ನ ಸಹೋದರರೇ, ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟುಮಾಡುತ್ತದೆಂದು ತಿಳಿದು ನೀವು ನಾನಾವಿಧವಾದ ಕಷ್ಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ಎಣಿಸಿರಿ.


ಆದದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆಪಡದೆ ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಶ್ರಮೆಯನ್ನನುಭವಿಸು.


ಸಂಕಟಗಳನ್ನು ಅನುಭವಿಸುವದಕ್ಕಾಗಿ ನಾವು ನೇವಿುಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ.


ಇದರ ನಿವಿುತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶದಲ್ಲಿಟ್ಟಿರುವದನ್ನು ಆತನು ಆ ದಿನಕ್ಕಾಗಿ ಕಾಪಾಡುವದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ನಿನ್ನ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯಮಾಡಿ ನಿನ್ನ ವಿಧಿಗಳನ್ನು ಎದುರಿಸುವವನು ಸಾಯತಕ್ಕವನೇ; ಸ್ಥಿರಚಿತ್ತನಾಗಿರು, ಧೈರ್ಯದಿಂದಿರು ಎಂದು ಹೇಳಿದರು.


ಇದಲ್ಲದೆ ಅವರು ಯೆಹೋಶುವನಿಗೆ - ಯೆಹೋವನು ನಿಜವಾಗಿ ಆ ದೇಶವನ್ನೆಲ್ಲಾ ನಮಗೆ ಕೊಟ್ಟಿದ್ದಾನೆ; ಅದರ ನಿವಾಸಿಗಳೆಲ್ಲಾ ನಮ್ಮ ನಿವಿುತ್ತ ಕಂಗೆಟ್ಟು ಹೋಗಿದ್ದಾರೆ ಎಂದು ತಿಳಿಸಿದರು.


ಅವಳನ್ನು ಅಡಗಿಸುವವನು ಗಾಳಿಯನ್ನು ಅಡಗಿಸುವನು; ಅವಳನ್ನು ಹಿಡಿಯುವ ಬಲಗೈ ಜಿಡ್ಡಿನ [ವಸ್ತುವನ್ನು] ಹಿಡಿಯುವದು.


ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಯಜಮಾನನ ಮಾತಿಗೆ ಕಾಯುವವನು ಮಾನವನ್ನನುಭವಿಸುವನು.


ಕೋಪಿಷ್ಠನು ಜಗಳವನ್ನೆಬ್ಬಿಸುವನು; ಕ್ರೋಧಶೀಲನು ದೋಷಭರಿತನು.


ಮರಿಯಳು ಇದನ್ನು ಕೇಳುತ್ತಲೇ ತಟ್ಟನೆ ಎದ್ದು ಆತನ ಬಳಿಗೆ ಹೋದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು