Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:21 - ಕನ್ನಡ ಸತ್ಯವೇದವು J.V. (BSI)

21 ಪುಟಕುಲುಮೆಗಳಿಂದ ಬೆಳ್ಳಿಬಂಗಾರಗಳಿಗೆ ಶೋಧನೆಯು ಹೇಗೋ ಹೊಗಳಿಕೆಯಿಂದ ಮನುಷ್ಯನಿಗೆ ಶೋಧನೆಯು ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪುಟಕುಲುಮೆಗಳಿಂದ ಬೆಳ್ಳಿಬಂಗಾರಗಳಿಗೆ ಶೋಧನೆಯು ಹೇಗೋ, ಹೊಗಳಿಕೆಯಿಂದ ಮನುಷ್ಯನಿಗೆ ಶೋಧನೆಯು ಹಾಗೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಬೆಳ್ಳಿಬಂಗಾರಗಳಿಗೆ ಪುಟಕುಲುಮೆಗಳಿಂದ ಶೋಧನೆ; ಮನುಷ್ಯನಿಗೆ ತನ್ನ ಸ್ತುತಿಕೀರ್ತಿಯಿಂದ ಪರಿಶೋಧನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಚಿನ್ನವಾಗಲಿ ಬೆಳ್ಳಿಯಾಗಲಿ ಬೆಂಕಿಯಿಂದ ಶುದ್ಧೀಕರಿಸಲ್ಪಡುವಂತೆಯೇ ಮನುಷ್ಯನು ಜನರಿಂದ ಬರುವ ಹೊಗಳಿಕೆಯಿಂದ ಪರೀಕ್ಷಿತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಬೆಳ್ಳಿ, ಬಂಗಾರಗಳ ಪುಟಕ್ಕೆ ಕುಲುಮೆ ಹೇಗೆಯೋ, ಹಾಗೆಯೇ ಹೊಗಳಿಕೆಯು ಮನುಷ್ಯನನ್ನು ಪರೀಕ್ಷಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:21
14 ತಿಳಿವುಗಳ ಹೋಲಿಕೆ  

ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು; ಹೃದಯಗಳನ್ನು ಶೋಧಿಸುವವನು ಯೆಹೋವನೇ.


ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು - ಇವರು ನನ್ನ ಜನರು ಅಂದುಕೊಳ್ಳುವೆನು, ಅವರು - ನಮ್ಮ ದೇವರಾದ ಯೆಹೋವನೇ ಅನ್ನುವರು.


ದೇವರೇ, ನಮ್ಮನ್ನು ಶೋಧಿಸಿದಿ; ಬೆಳ್ಳಿಯನ್ನು ಪುಟಕ್ಕೆ ಹಾಕುವ ಮೇರೆಗೆ ಶುದ್ಧಿಮಾಡಿದಿ.


ಬಂಗಾರವು ನಾಶವಾಗುವಂಥದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟಾಹಾಕಿ ಶೋಧಿಸುವದುಂಟಷ್ಟೆ. ಬಂಗಾರಕ್ಕಿಂತ ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವ ಮಾನಗಳನ್ನು ಉಂಟುಮಾಡುವದು.


ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.


ಪ್ರಿಯರೇ, ನೀವು ಪರಿಶೋಧನೆಗಾಗಿ ಪುಟಕ್ಕೆ ಹಾಕಲ್ಪಟ್ಟದ್ದಕ್ಕೆ ಆಶ್ಚರ್ಯಪಡಬೇಡಿರಿ; ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.


ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.


ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಾಯೇಲ್ಯರಲ್ಲಿ ಒಬ್ಬನೂ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯವರೆಗೆ ಒಂದು ದೋಷವಾದರೂ ಇರಲಿಲ್ಲ.


ಫಿಲಿಷ್ಟಿಯಪ್ರಭುಗಳು ಯುದ್ಧಕ್ಕೆ ಬಂದಾಗೆಲ್ಲಾ ಸೌಲನ ಸೇನಾಪತಿಗಳಲ್ಲಿ ದಾವೀದನೇ ಅಧಿಕಜಯಶೀಲನಾಗಿ ಬರುತ್ತಿದ್ದದರಿಂದ ಅವನ ಹೆಸರು ಬಹು ಪ್ರಸಿದ್ಧವಾಯಿತು.


ಜನರೆಲ್ಲಾ ನಿಮ್ಮನ್ನು ಹೊಗಳಿದರೆ ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪಿತೃಗಳು ಸುಳ್ಳುಪ್ರವಾದಿಗಳನ್ನು ಹಾಗೆಯೇ ಹೊಗಳಿದರು.


ಬೆಳ್ಳಿ ಸಿಕ್ಕುವ ಗಣಿಯೂ ಚಿನ್ನದ ಅದುರು ದೊರಕುವ ಸ್ಥಳವೂ ಉಂಟಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು