Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:8 - ಕನ್ನಡ ಸತ್ಯವೇದವು J.V. (BSI)

8 ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು ಗೂಡನ್ನು ಬಿಟ್ಟು ಅಲೆಯುವ ಹಕ್ಕಿಯ ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು, ಗೂಡನ್ನು ಬಿಟ್ಟು ಅಲೆಯುವ ಹಕ್ಕಿಯ ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮನೆಬಿಟ್ಟು ಅಲೆಯುವ ವ್ಯಕ್ತಿ, ಗೂಡುಬಿಟ್ಟು ಅಲೆಯುವ ಹಕ್ಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮನೆಯಿಂದ ದೂರವಿರುವ ಗಂಡಸು ಗೂಡಿನಿಂದ ದೂರವಿರುವ ಪಕ್ಷಿಯಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ತನ್ನ ಮನೆಯನ್ನು ಬಿಟ್ಟು ಅಲೆಯುವ ಮನುಷ್ಯನು ತನ್ನ ಗೂಡನ್ನು ಬಿಟ್ಟು ಅಲೆಯುವ ಪಕ್ಷಿಯಂತೆ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:8
17 ತಿಳಿವುಗಳ ಹೋಲಿಕೆ  

ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಮೋವಾಬಿನ ಊರುಗಳವರು ಅಲೆಯುವ ಪಕ್ಷಿಗಳಂತೆಯೂ ಗೂಡಿನಿಂದ ಚದರಿದ ಮರಿಗಳ ಹಾಗೂ ಆಗುವರು.


ಜ್ಞಾನಮಾರ್ಗದಿಂದ ತಪ್ಪಿದವನಿಗೆ ಪ್ರೇತ ಸಮೂಹವೇ ವಿಶ್ರಾಂತಿಸ್ಥಾನ.


ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಆ ಸ್ಥಿತಿಯಲ್ಲಿಯೇ ಇರಬೇಕು.


ಆದರೆ ಯೋನನು ಯೆಹೋವನ ಸನ್ನಿಧಿಗೆ ತಪ್ಪಿಸಿಕೊಳ್ಳುವ ಹಾಗೆ ತಾರ್ಷೀಷಿಗೆ ಓಡಿಹೋಗಬೇಕೆಂದು ಹೊರಟು ಯೊಪ್ಪಕ್ಕೆ ಇಳಿದು ಅಲ್ಲಿ ತಾರ್ಷೀಷಿಗೆ ತೆರಳುವ ಹಡಗನ್ನು ಕಂಡು ಬಾಡಿಗೆಕೊಟ್ಟು ಯೆಹೋವನ ಸನ್ನಿಧಿಯಿಂದ ತಾರ್ಷೀಷಿಗೆ ಪ್ರಯಾಣಮಾಡಬೇಕೆಂದು ಹಡಗಿನವರೊಡನೆ ಅದನ್ನು ಹತ್ತಿದನು.


ಅಲ್ಲಿನ ಒಂದು ಗವಿಯಲ್ಲಿ ಇಳುಕೊಂಡನು. ಆಗ ಅವನಿಗೆ ಯೆಹೋವನಿಂದ - ಎಲೀಯನೇ, ನೀನು ಇಲ್ಲೇನು ಮಾಡುತ್ತೀ ಎಂಬ ವಾಣಿಯು ಕೇಳಿಸಿತು.


ಗಾದ್‍ಪ್ರವಾದಿಯು ದಾವೀದನಿಗೆ - ನೀನು ಈ ದುರ್ಗದಲ್ಲಿರಬಾರದು; ಇದನ್ನು ಬಿಟ್ಟು ಯೆಹೂದ ದೇಶಕ್ಕೆ ಹೋಗು ಎಂದು ಹೇಳಿದದರಿಂದ ಅವನು ಹೆರೆತ್ ಅರಣ್ಯಕ್ಕೆ ಹೋದನು.


ಕುಪ್ಪಳಿಸುತ್ತಿರುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯ ಹಾಗೆ, ನಿವಿುತ್ತವಿಲ್ಲದೆ ಕೊಟ್ಟ ಶಾಪವು ಎರಗಿ ನಿಲ್ಲದು.


ಕಾಯಿನನು ಯೆಹೋವನ ಸನ್ನಿಧಾನದಿಂದ ಹೊರಟು ನೋದು ಎಂಬ ದೇಶದಲ್ಲಿ ವಾಸಿಸಿದನು; ಅದು ಏದೆನ್ ಸೀಮೆಗೆ ಮೂಡಲಲ್ಲಿರುವದು.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.


ಮಾರಣೇ ದಿನ ಬೆಳಿಗ್ಗೆ ಅಬ್ರಹಾಮನು ಎದ್ದು ಹಾಗರಳಿಗೆ ಬುತ್ತಿಯನ್ನೂ ಒಂದು ತಿತ್ತಿ ತಣ್ಣೀರನ್ನೂ ಕೊಟ್ಟು ಅವಳ ಹೆಗಲಿನ ಮೇಲೆ ಇಟ್ಟು ಮಗುವನ್ನು ಒಪ್ಪಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ಹೊಟ್ಟೆತುಂಬಿದವನಿಗೆ ಜೇನುತುಪ್ಪವೂ ಅಸಹ್ಯ; ಹೊಟ್ಟೆಹಸಿದವನಿಗೆ ಕಹಿಯೆಲ್ಲಾ ಸಿಹಿ.


ಫರೋಹನು ಅವನನ್ನು - ನನ್ನ ಬಳಿಯಲ್ಲಿ ನಿನಗೇನು ಕೊರತೆಯಾಯಿತು? ಸ್ವದೇಶಕ್ಕೆ ಹೋಗಬೇಕೆಂದು ಯಾಕೆ ಆಶಿಸುತ್ತೀ ಎಂದು ಕೇಳಲು ಅವನು - ಏನೂ ಕೊರತೆಯಾಗಿರುವದಿಲ್ಲ; ಆದರೂ ನನಗೆ ಹೋಗುವದಕ್ಕೆ ಅಪ್ಪಣೆಯಾಗಬೇಕು ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು