Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:12 - ಕನ್ನಡ ಸತ್ಯವೇದವು J.V. (BSI)

12 ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವದು; ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವುದು, ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸತ್ಯಸಂಧರಿಗೆ ಜಯವಾದರೆ ಸಂಭ್ರಮ ಸಡಗರ; ದುಷ್ಟರನ್ನು ಉನ್ನತಿಗೇರಿಸಿದರೆ ಬೇರೆಯವರು ಮರೆಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಒಳ್ಳೆಯವರು ನಾಯಕರಾದಾಗ ಎಲ್ಲರಿಗೂ ಸಂತೋಷ. ಆದರೆ ಕೆಡುಕನು ಅಧಿಪತಿಯಾದಾಗ ಎಲ್ಲರೂ ಅಡಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀತಿವಂತರಿಗೆ ಜಯವಾದರೆ, ದೊಡ್ಡ ಘನತೆ ಇರುವುದು. ಆದರೆ ದುಷ್ಟರಿಗೆ ಏಳಿಗೆಯಾದರೆ, ಮನುಷ್ಯರು ಅಡಗಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:12
21 ತಿಳಿವುಗಳ ಹೋಲಿಕೆ  

ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ; ದುಷ್ಟನ ಆಳಿಕೆ ಜನರಿಗೆ ನರಳಾಟ.


ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ; ದುರ್ಜನರು ಹಾಳಾದರೆ ಜಯಘೋಷ.


ದುಷ್ಟರು ಎದ್ದರೆ ಜನರು ಅಡಗಿಕೊಳ್ಳುವರು; ನಾಶನವಾದರೆ ಶಿಷ್ಟರು ವೃದ್ಧಿಯಾಗುವರು.


ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನೂ ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.


ಯೆರೂಸಲೇವಿುನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನನುಸರಿಸುವ ಒಬ್ಬನಾದರೂ ಇದ್ದಾನೋ, ಇಂಥ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷವಿುಸುವೆನು.


ಎಲೆ ದೇಶವೇ ನಿನ್ನ ರಾಜನು ಬಾಲನಾಗಿದ್ದು ಪ್ರಭುಗಳು ಹೊತ್ತಾರೆ ಔತಣಕ್ಕೆ ಕೂತುಕೊಂಡರೆ ನಿನಗೆ ದೌರ್ಭಾಗ್ಯವೇ.


ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನದಲ್ಲಿ ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ ಸೊಲೊಮೋನರಿಗೂ ಆತನ ಪ್ರಜೆಗಳಾದ ಇಸ್ರಾಯೇಲ್ಯರಿಗೂ ಉಂಟಾದ ಉಪಕಾರಗಳನ್ನು ನೆನಸಿಕೊಂಡು ಆನಂದಭರಿತರಾಗಿ ಹರ್ಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೋದರು.


ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.


ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾವಿುಯಾದ ನಿನಗೆ ತಿಳಿಸಲ್ಪಡಲಿಲ್ಲವೋ? ಅವರಲ್ಲಿ ನೂರು ಮಂದಿಯನ್ನು ತೆಗೆದುಕೊಂಡು ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು ಅನ್ನಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.


ನನ್ನ ತಂದೆಯೇ, ಇಗೋ ನೋಡು; ನನ್ನ ಕೈಯಲ್ಲಿ ನಿನ್ನ ನಿಲುವಂಗಿಯ ತುಂಡು ಇದೆ; ನಾನು ನಿನ್ನನ್ನು ಕೊಲ್ಲದೆ ನಿನ್ನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡೆನಷ್ಟೆ. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವದಿಲ್ಲ. ನಾನು ನಿನಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೋ. ಆದರೂ ನೀನು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವಿಯಲ್ಲಾ;


ಆಗ ಪ್ರಧಾನರು ಬಾರೂಕನಿಗೆ - ಹೊರಡು, ನೀನೂ ಯೆರೆಮೀಯನೂ ಅಡಗಿಕೊಳ್ಳಿರಿ, ನೀವೆಲ್ಲಿದ್ದೀರೆಂಬದು ಯಾರಿಗೂ ಗೊತ್ತಾಗಬಾರದು ಎಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು