Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:18 - ಕನ್ನಡ ಸತ್ಯವೇದವು J.V. (BSI)

18 ಸನ್ಮಾರ್ಗಿಗೆ ಉದ್ಧಾರ, ವಕ್ರಮಾರ್ಗಿಗೆ ತಟ್ಟನೆ ಪತನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸನ್ಮಾರ್ಗಿಗೆ ಉದ್ಧಾರ, ವಕ್ರಮಾರ್ಗಿಗೆ ತಟ್ಟನೆ ಸೋಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸನ್ಮಾರ್ಗಿಗಳಿಗೆ ಸಂರಕ್ಷಣೆ, ದುರ್ಮಾರ್ಗಿಗಳಿಗೆ ಪತನ ತಟ್ಟನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಒಳ್ಳೆಯವನು ಕ್ಷೇಮವಾಗಿರುವನು; ಕೆಡುಕನಾದರೋ ಇದ್ದಕ್ಕಿದ್ದಂತೆ ಹಾಳಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿರ್ದೋಷಿಯಾಗಿ ನಡೆಯುವವನು ಸಂರಕ್ಷಣೆ ಹೊಂದುವನು. ವಕ್ರಮಾರ್ಗಿಯು ತಟ್ಟನೆ ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:18
18 ತಿಳಿವುಗಳ ಹೋಲಿಕೆ  

ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು; ವಕ್ರಮಾರ್ಗಿಯು ಬೈಲಿಗೆ ಬೀಳುವನು.


ವಕ್ರಮಾರ್ಗಿಯಾದ ಐಶ್ವರ್ಯವಂತನಿಗಿಂತ ನಿರ್ದೋಷವಾಗಿ ನಡೆಯುವ ದರಿದ್ರನು ಶ್ರೇಷ್ಠನು.


ಆದದರಿಂದ ನೀನು ಹೊಂದಿದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೊಂಡು ಅದನ್ನು ಕಾಪಾಡಿಕೋ ಮತ್ತು ದೇವರ ಕಡೆಗೆ ತಿರುಗಿಕೋ. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯುವದೇ ಇಲ್ಲ.


ಯೆಹೋವದೇವರು ಸೂರ್ಯನೂ ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು?


ಯೆಹೋವನ ದೂತನು - ನೀನು ಮೂರು ಸಾರಿಗೂ ನಿನ್ನ ಕತ್ತೆಯನ್ನು ಹೊಡೆದದ್ದೇಕೆ; ನೀನು ನನಗೆ ವಿರುದ್ಧವಾದ ಮಾರ್ಗವನ್ನು ಹಿಡಿದದ್ದರಿಂದ ನಿನ್ನನ್ನು ತಡೆಯುವದಕ್ಕೆ ನಾನೇ ಬಂದಿದ್ದೇನೆ.


ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯುವದಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ - ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ - ನೀವು ಯೆಹೂದ್ಯರ ಪದ್ಧತಿಗಳನ್ನು ಅನುಸರಿಸಬೇಕೆಂದು ನೀನು ಬಲಾತ್ಕಾರ ಮಾಡುವದು ಹೇಗೆ?


ಬಿರುಗಾಳಿ ಬೀಸಿದರೆ ದುಷ್ಟನು ಎಲ್ಲೋ! ಶಿಷ್ಟನು ಶಾಶ್ವತವಾದ ಕಟ್ಟಡ.


ಯೆಹೋವನು ಡೊಂಕುದಾರಿಹಿಡಿದವರನ್ನು ಪಾತಕಿಗಳ ಗತಿಗೆ ಹೋಗಮಾಡಲಿ. ಇಸ್ರಾಯೇಲ್ಯರಿಗೆ ಶುಭವುಂಟಾಗಲಿ.


ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು; ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು.


ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಯಥಾರ್ಥತ್ವವೂ ನನ್ನನ್ನು ಕಾಯಲಿ.


ಯೆಹೋವನಿಗೆ ಭಯಪಡುವವರ ದಿನಗಳಿಗೆ ವೃದ್ಧಿ; ದುಷ್ಟರ ವರುಷಗಳಿಗೆ ಕ್ಷಯ.


ಬೆಳಿಗ್ಗೆ ಬಿಳಾಮನು ತನ್ನ ಕತ್ತೆಗೆ ತಡಿಹಾಕಿಸಿ ಮೋವಾಬ್ಯರ ಪ್ರಧಾನರ ಜೊತೆಯಲ್ಲಿ ಹೊರಟನು.


ಯೆಹೋವನ ದೂತನು ಅವನಿಗೆ - ಆ ಮನುಷ್ಯರ ಜೊತೆಯಲ್ಲಿ ಹೋಗು; ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವದನ್ನೂ ಹೇಳಬಾರದು ಎಂದು ಹೇಳಲಾಗಿ ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟನು.


ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು; ನಿರ್ದೋಷಿಗಳಿಗೋ ಸುಖವು ಸೊತ್ತಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು