Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:23 - ಕನ್ನಡ ಸತ್ಯವೇದವು J.V. (BSI)

23 ಮುಖಸ್ತುತಿ ಮಾಡುವವನಿಗಿಂತಲೂ ಗದರಿಸುವವನು ಬಳಿಕ ಹೆಚ್ಚು ದಯಾಪಾತ್ರನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮುಖಸ್ತುತಿ ಮಾಡುವವನಿಗಿಂತಲೂ, ಗದರಿಸುವವನು ಬಳಿಕ ಹೆಚ್ಚು ದಯಾಪಾತ್ರನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಮುಖಸ್ತುತಿ ಮಾಡುವವನಿಗಿಂತ ಗದರಿಸುವವನೇ ಕೊನೆಗೆ ಹೆಚ್ಚು ದಯಾವಂತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಗದರಿಸುವವನು ಸ್ವಲ್ಪಕಾಲದ ನಂತರ ಮುಖಸ್ತುತಿ ಮಾಡುವವನಿಗಿಂತಲೂ ಹೆಚ್ಚಾಗಿ ಗೌರವಿಸಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ, ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:23
12 ತಿಳಿವುಗಳ ಹೋಲಿಕೆ  

ಇದಲ್ಲದೆ ನಿನ್ನ ಸಹೋದರನು ತಪ್ಪುಮಾಡಿದರೆ ನೀನು ಹೋಗಿ ನೀನೂ ಅವನೂ ಇಬ್ಬರೇ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.


ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗುಪಕಾರ; ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ; ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರೋಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.


ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದರಿಂದ ನಾನು ಅವನನ್ನು ಮುಖಾಮುಖಿಯಾಗಿ ಎದುರಿಸಿದೆನು.


ನೆರೆಯವನೊಂದಿಗೆ ವಂಚಿಸುವ ಸವಿನುಡಿಗಳನ್ನಾಡುವವನು ಅವನ ಹೆಜ್ಜೆಗೆ ಬಲೆಯನ್ನೊಡ್ಡುವನು.


ಸೇವಕರು ನಾತಾನನು ಬಂದಿರುವ ಸಂಗತಿಯನ್ನು ಅರಸನಿಗೆ ತಿಳಿಸಿದರು. ನಾತಾನನು ಅರಸನ ಮುಂದೆ ಹೋಗಿ ಸಾಷ್ಟಾಂಗನಮಸ್ಕಾರಮಾಡಿ -


ಆಗ ನಾತಾನನು ದಾವೀದನನ್ನು ನೋಡಿ - ಆ ಮನುಷ್ಯನು ನೀನೇ. ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ ಹೇಳುವದೇನಂದರೆ - ನಿನ್ನನ್ನು ಅಭಿಷೇಕಿಸಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದವನೂ ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನೂ ನಾನೇ.


ದುಷ್ಟನನ್ನು ಗದರಿಸುವವರಿಗಾದರೋ ಶುಭವಾಗುವದು, ಸುಖಕರವಾದ ಆಶೀರ್ವಾದವೂ ಲಭಿಸುವದು.


ಆದರೆ ನಾನು ಯಾರಿಗೂ ಮುಖದಾಕ್ಷಿಣ್ಯವನ್ನು ತೋರಿಸಬಾರದು, ಯಾವ ಮನುಷ್ಯನಿಗಾದರೂ ಮುಖಸ್ತುತಿಯನ್ನು ಮಾಡಕೂಡದು.


ಮುಖಸ್ತುತಿಯನ್ನು ಮಾಡುವದಕ್ಕೆ ನನ್ನಿಂದಾಗುವದಿಲ್ಲ; ಮಾಡಿದರೆ ನನ್ನ ಸೃಷ್ಟಿಕರ್ತನು ನನ್ನನ್ನು ಬೇಗ ಹೊತ್ತುಕೊಂಡು ಹೋದಾನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು