Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:26 - ಕನ್ನಡ ಸತ್ಯವೇದವು J.V. (BSI)

26 ತನ್ನಲ್ಲೇ ಭರವಸವಿಡುವವನು ಮೂಢನು; ಜ್ಞಾನದಿಂದ ನಡೆಯುವವನು ಉದ್ಧಾರವನ್ನು ಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ತನ್ನಲ್ಲೇ ಭರವಸವಿಡುವವನು ಮೂಢನು, ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ತನ್ನ ಶಕ್ತಿಯಲ್ಲೆ ಭರವಸೆ ಇಡುವವನು ಮೂಢನು; ಜ್ಞಾನಿಗಳ ಮಾರ್ಗದಲ್ಲಿ ನಡೆವವನು ವಿಮುಕ್ತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಸ್ವಂತ ಆಲೋಚನೆಯ ಮೇಲೆ ಭರವಸೆ ಇಡುವವನು ಮೂರ್ಖನಾಗಿದ್ದಾನೆ. ಜ್ಞಾನಮಾರ್ಗದಲ್ಲಿ ನಡೆಯುವವನು ಸುರಕ್ಷಿತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ತನ್ನ ಬುದ್ಧಿಯಲ್ಲಿಯೇ ಭರವಸವಿಡುವವನು ಬುದ್ಧಿಹೀನನು; ಆದರೆ ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:26
13 ತಿಳಿವುಗಳ ಹೋಲಿಕೆ  

ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.


ಹೃದಯವು ಎಲ್ಲಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ಯಾರು ತಿಳಿದಾರು?


ಆಮೇಲೆ ಮನುಷ್ಯರಿಗೆ - ಇಗೋ, ಕರ್ತನ ಭಯವೇ ಜ್ಞಾನವು ದುಷ್ಟತನವನ್ನು ಬಿಡುವದೇ ವಿವೇಕವು ಎಂದು ಹೇಳಿದನು.


ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ.


ಯಾಕಂದರೆ ಶರೀರಭಾವದವುಗಳ ಮೇಲೆ ಮನಸ್ಸಿಡುವದು ದೇವರಿಗೆ ಶತ್ರುತ್ವವು; ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದೂ ಇಲ್ಲ, ಒಳಪಡುವದಕ್ಕಾಗುವದೂ ಇಲ್ಲ.


ಆ ಗ್ರಂಥಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.


ಹಜಾಯೇಲನು ಎಲೀಷನನ್ನು - ನಿನ್ನ ಸೇವಕನಾದ ನಾನು ನಾಯಿಯಂತಿರುತ್ತೇನಷ್ಟೆ; ನನ್ನಿಂದ ಇಂಥ ಮಹಾಕಾರ್ಯವಾಗುವದು ಹೇಗೆ ಎಂದು ಕೇಳಲು ಅವನು - ನೀನು ಅರಾಮ್ಯರ ಅರಸನಾಗುವಿಯೆಂದು ಯೆಹೋವನು ನನಗೆ ತಿಳಿಸಿದ್ದಾನೆ ಅಂದನು.


ಇದರಿಂದ ನೀನು ದುರ್ಮಾರ್ಗದಿಂದಲೂ ಕೆಟ್ಟ ಮಾತನಾಡುವವರಿಂದಲೂ ತಪ್ಪಿಸಿಕೊಳ್ಳುವಿ.


ನೀನೇ ಬುದ್ಧಿವಂತನು ಎಂದೆಣಿಸದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.


ತಾನೇ ಜ್ಞಾನಿಯೆಂದೆಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು